ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ‍್ಯಾಂಕಿಂಗ್: ಜೀವನಶ್ರೇಷ್ಠ ಆರನೇ ಸ್ಥಾನಕ್ಕೆ ಲಕ್ಷ್ಯ

Last Updated 8 ನವೆಂಬರ್ 2022, 13:01 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಲಕ್ಷ್ಯ ಸೇನ್ ಅವರು ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ರ‍್ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ ಆರನೇ ಸ್ಥಾನಕ್ಕೇರಿದ್ದಾರೆ.

21 ವರ್ಷದ ಆಟಗಾರ, ಸಿಂಗಲ್ಸ್ ವಿಭಾಗದಲ್ಲಿ 76,424 ಪಾಯಿಂಟ್ಸ್ ಕಲೆಹಾಕಿದ್ದು, ಎರಡು ಸ್ಥಾನಗಳ ಏರಿಕೆ ದಾಖಲಿಸಿದ್ದಾರೆ.

ಫ್ರೆಂಚ್‌ ಓಪನ್ ನೂತನ ಚಾಂಪಿಯನ್‌ಗಳಾದ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್‌ನಲ್ಲಿ ಒಂದು ಸ್ಥಾನ ಮೇಲೇರಿದ್ದು, ಜೀವನಶ್ರೇಷ್ಠ ಏಳನೇ ಸ್ಥಾನಕ್ಕೆ ಮರಳಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ತ್ರಿಶಾ ಜೋಲಿ– ಗಾಯತ್ರಿ ಗೋಪಿಚಂದ್‌, ಮಿಶ್ರ ಡಬಲ್ಸ್‌ನಲ್ಲಿ ಇಶಾನ್ ಭಟ್ನಾಗರ್– ತನಿಶಾ ಕ್ರಾಸ್ತೊ ಕ್ರಮವಾಗಿ 23 ಮತ್ತು 28ನೇ ಕ್ರಮಾಂಕಕ್ಕೇರಿದ್ದಾರೆ.

ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ.ಸಿಂಧು ಐದನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT