ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾನ್‌ ಬಾಲ್ಸ್: ಲವ್ಲಿ–ಸೈಕಿಯಾಗೆ ಸೋಲು

Last Updated 5 ಆಗಸ್ಟ್ 2022, 13:44 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್: ಭಾರತದ ಲವ್ಲಿ ಚೌಬೆ ಮತ್ತು ನಯನ್ಮಣಿ ಸೈಕಿಯಾ ಅವರು ಲಾನ್‌ ಬಾಲ್ಸ್‌ ಟೂರ್ನಿಯ ಮಹಿಳೆಯರ ಡಬಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತರು.

ಶುಕ್ರವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ನ ಸೋಫಿ ಟೊಚಾರ್ಡ್– ಆಮಿ ಫರೋವ ಅವರು 18–14 ರಲ್ಲಿ ಭಾರತದ ಜೋಡಿಯನ್ನು ಮಣಿಸಿ ಸೆಮಿಫೈನಲ್‌ಗೇರಿದರು.

ಲಾನ್‌ ಬಾಲ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ಗೆದ್ದ ತಂಡದಲ್ಲಿದ್ದ ಲವ್ಲಿ ಮತ್ತು ಸೈಕಿಯಾ ಮೊದಲು 5–2 ರಲ್ಲಿ ಹಾಗೂ ಬಳಿಕ 8–6 ರಲ್ಲಿ ಮುನ್ನಡೆ ಗಳಿಸಿದ್ದರು. ಆದರೆ ಈ ಮೇಲುಗೈಯನ್ನು ಸದುಪಯೋಗಪಡಿಸಿಕೊಳ್ಳಲು ಆಗಲಿಲ್ಲ.

ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌– ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ– ಮಲೇಷ್ಯಾ ತಂಡಗಳು ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT