ಮಂಗಳವಾರ, ಸೆಪ್ಟೆಂಬರ್ 28, 2021
20 °C

ವಿಶ್ವ ಬ್ಯಾಡ್ಮಿಂಟನ್‌ಗೆ ಲೀ ಇಲ್ಲ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಕ್ವಾಲಾಲಂಪುರ: ಆಗಸ್ಟ್‌ ತಿಂಗಳಲ್ಲಿ ನಡೆಯಲಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಲೇಷ್ಯಾದ ಲೀ ಚಾಂಗ್ ವೀ ಆಡುವುದಿಲ್ಲ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರು ಇತ್ತೀಚೆಗೆ ಸತತವಾಗಿ ಪ್ರಮುಖ ಟೂರ್ನಿಗಳಲ್ಲಿ ಆಡಿರಲಿಲ್ಲ. ಹೀಗಾಗಿ ರ‍್ಯಾಂಕಿಂಗ್‌ನಲ್ಲಿ ಭಾರಿ ಕುಸಿತ ಕಂಡಿದ್ದಾರೆ. ಇದು ಅವರಿಗೆ ಕುತ್ತು ತಂದಿದೆ ಎಂದು ಹೇಳಲಾಗಿದೆ.

ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದ್ದ ಲೀ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಉತ್ಸಾಹದಲ್ಲಿದ್ದರು. ಈ ಮೂಲಕ ಮುಂದಿನ ಒಲಿಂಪಿಕ್ಸ್‌ನಲ್ಲೂ ಸಾಧನೆ ಮಾಡುವ ಭರವಸೆ ಹೊಂದಿದ್ದರು. ಈಗ ಅವರು ರ‍್ಯಾಂಕಿಂಗ್‌ನಲ್ಲಿ 113ನೇ ಸ್ಥಾನಕ್ಕೆ ಕುಸಿದಿದ್ದಾರೆ.

ರ‍್ಯಾಂಕಿಂಗ್‌ನಲ್ಲಿ 150ರ ಒಳಗಿನ ಸ್ಥಾನದಲ್ಲಿರುವ ಇಬ್ಬರನ್ನು ಚಾಂಪಿಯನ್‌ಷಿಪ್‌ಗೆ ಕಳುಹಿಸಲು ಅವಕಾಶವಿದೆ. ಮಲೇಷ್ಯಾದಲ್ಲಿ ಲೀ ಅವರಿಗಿಂತ ಮೇಲಿನ ಸ್ಥಾನದಲ್ಲಿ ಲೀ ಜಿ ಜಿಯಾ ಮತ್ತು ಲ್ಯೂ ಡ್ಯಾರೆನ್ ಇದ್ದಾರೆ. ಆದ್ದರಿಂದ ಲೀ ಚಾಂಗ್‌ ಅವರನ್ನು ಕಳುಹಿಸಲು ಸಾಧ್ಯವಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.