ಭಾನುವಾರ, ಸೆಪ್ಟೆಂಬರ್ 19, 2021
28 °C

Paralympics: ಚಿನ್ನ ಬೆನ್ನಲ್ಲೇ ಕಂಚು ಗೆದ್ದ 19 ವರ್ಷದ ಅವನಿ ಐತಿಹಾಸಿಕ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಯುವ ಶೂಟರ್ 19 ವರ್ಷದ ಅವನಿ ಲೇಖರಾ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 

ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್1 ವಿಭಾಗದಲ್ಲಿ ಚಿನ್ನ ಗೆದ್ದಿರುವ ಅವನಿ ಈಗ ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ ಎಸ್‌ಎಚ್1 ವಿಭಾಗದಲ್ಲೂ ಕಂಚಿನ ಪದಕ ಗೆದ್ದಿದ್ದಾರೆ. 

ಇದನ್ನೂ ಓದಿ: 

ಈ ಮೂಲಕ ಪ್ಯಾರಾಂಲಿಪಿಕ್ಸ್‌ ಇತಿಹಾಸದಲ್ಲೇ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾ ಕ್ರೀಡಾಪಟು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿರುವ ಅವನಿ, ಈಗ ಕಂಚಿನ ಪದಕದೊಂದಿಗೆ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದಾರೆ.    

ಇದರೊಂದಿಗೆ ಪ್ಯಾರಾ ಕ್ರೀಡಾಕೂಟವೊಂದರಲ್ಲೇ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎನಿಸಿದ್ದಾರೆ.  

2012ರಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಸೊಂಟಕ್ಕಿಂತ ಕೆಳಭಾಗದ ಸ್ವಾಧೀನ ಕಳೆದುಕೊಂಡ ಅವನಿ ಲೇಖರಾ ನಂತರ ಎಲ್ಲದಕ್ಕೂ ಎಲ್ಲರಲ್ಲೂ ಕೋಪ ಮಾಡಿಕೊಳ್ಳುತ್ತಿದ್ದರು. ಅವರ ಮನಸ್ತಾಪ ತಣಿಸಲು ತಂದೆ ಪ್ರವೀಣ್ ಅವರು ಜೈಪುರದ ಶೂಟಿಂಗ್‌ ರೇಂಜ್‌ಗೆ ಕರೆದುಕೊಂಡು ಹೋದರು. ಆ ಭೇಟಿ ಅವರ ಬದುಕಿನ ಹಾದಿಗೆ ಮಹತ್ವದ ತಿರುವು ನೀಡಿತು. 

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ:

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು