ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಗ್ಗಜ ಅಥ್ಲೀಟ್ ಮಿಲ್ಕಾಸಿಂಗ್ ನಿಧನ

Last Updated 19 ಜೂನ್ 2021, 2:42 IST
ಅಕ್ಷರ ಗಾತ್ರ

ಚಂಡೀಗಡ: ‘ಫ್ಲೈಯಿಂಗ್ ಸಿಖ್‘ ಖ್ಯಾತಿಯ ಅಥ್ಲೀಟ್ ಮಿಲ್ಕಾ ಸಿಂಗ್ (91) ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದರು.

ಕೋವಿಡ್‌ ಸೋಂಕಿಗೊಳಗಾಗಿದ್ದ ಅವರು ಇಲ್ಲಿಯ ಪಿಜಿಐಎಂಇಆರ್‌ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಅವರ ಪತ್ನಿ, ಭಾರತ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಈಚೆಗಷ್ಟೇ ಕೋವಿಡ್‌ನಿಂದಾಗಿ ನಿಧನರಾಗಿದ್ದರು.

ಮಿಲ್ಖಾ ಅವರಿಗೆ ಮಗ, ಗಾಲ್ಫ್ ಆಟಗಾರ ಜೀವ್ ಮಿಲ್ಕಾಸಿಂಗ್ ಮತ್ತು ಮಗಳು ಇದ್ದಾರೆ.

1960ರ ರೋಮ್ ಒಲಿಂಪಿಕ್ಸ್‌ನ 400 ಮೀಟರ್ಸ್ ಓಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. 1956 ಮತ್ತು 1964ರ ಒಲಿಂಪಿಕ್ಸ್‌ನಲ್ಲಿಯೂ ಭಾರತವನ್ನು ಪ್ರತಿನಿಧಿಸಿದ್ದರು. 1958ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು. ಏಷ್ಯನ್ ಗೇಮ್ಸ್‌ನಲ್ಲಿ ನಾಲ್ಕು ಬಾರಿ ಚಿನ್ನ ಗೆದ್ದ ಹೆಗ್ಗಳಿಕೆ ಅವರದ್ದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT