ಶುಕ್ರವಾರ, ಆಗಸ್ಟ್ 12, 2022
25 °C

ಮಿಲ್ಕಾ ಸಿಂಗ್ ಪತ್ನಿ ನಿರ್ಮಲ್‌ ಕೌರ್‌ ಕೋವಿಡ್‌ನಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಢ: ಭಾರತದ ಅಥ್ಲೀಟ್‌ ದಿಗ್ಗಜ ಮಿಲ್ಕಾ ಸಿಂಗ್ ಅವರ ಪತ್ನಿ, ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಮೊಹಾಲಿ ಆಸ್ಪತ್ರೆಯಲ್ಲಿ ಕೊವಿಡ್ -19ಗೆ ಸಂಬಂಧಿಸಿದ ತೊಂದರೆಗಳಿಂದಾಗಿ ಭಾನುವಾರ ನಿಧನರಾಗಿದ್ದಾರೆ.

ಅವರಿಗೆ 85 ವರ್ಷವಾಗಿತ್ತು. ಪತಿ, ಒಬ್ಬ ಮಗ ಮತ್ತು ಮೂವರು ಪುತ್ರಿಯರನ್ನು ನಿರ್ಮಲ್‌ ಕೌರ್‌ ಅವರು ಅಗಲಿದ್ದಾರೆ.

‘ಕೋವಿಡ್‌ ವಿರುದ್ಧ ಸೆಣಸುತ್ತಿದ್ದ ನಿರ್ಮಲ್ ಇಂದು ಸಂಜೆ 4ರ ಸುಮಾರಿನಲ್ಲಿ ಇಹಲೋಕ ತ್ಯಜಿಸಿದರು ಎಂದು ತಿಳಿಸಲು ದುಃಖವಾಗಿದೆ,‘ ಎಂದು ಮಿಲ್ಕಾ ಕುಟುಂಬದ ಆಪ್ತರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಭಾನುವಾರ ಸಂಜೆ ನಡೆಸಿದ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಿಲ್ಕಾ ಸಿಂಗ್‌ ಅವರಿಗೆ ಸಾಧ್ಯವಾಗಲಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ಮಿಲ್ಕಾ ಸಿಂಗ್‌ ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,‘ ಎಂದೂ ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು