ಶನಿವಾರ, ಸೆಪ್ಟೆಂಬರ್ 18, 2021
30 °C

ಖೇಲ್ ರತ್ನ ಹೆಸರು ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ ಮೋದಿ ಘೋಷಣೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯ ಹೆಸರು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವಂತೆ ಅನೇಕ ನಾಗರಿಕರಿಂದ ಮನವಿಗಳು ಬಂದಿವೆ. ಅವರ ಅಭಿಪ್ರಾಯಗಳಿಗಾಗಿ ಅವರನ್ನು ಗೌರವಿಸುತ್ತೇನೆ. ಅವರ ಭಾವನೆಗಳನ್ನು ಗೌರವಿಸಿ ಪ್ರಶಸ್ತಿಯ ಹೆಸರನ್ನು ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಎಂದು ಕರೆಯಲಾಗುವುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಭಾರತಕ್ಕೆ ಗೌರವ ತಂದುಕೊಟ್ಟ ಮತ್ತು ದೇಶದ ಹೆಮ್ಮೆಯ ಕ್ರೀಡಾಪಟುಗಳಲ್ಲಿ ಮೇಜರ್ ಧ್ಯಾನ್ ಚಂದ್ ಅಗ್ರಗಣ್ಯರು. ದೇಶದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಧ್ಯಾನ್‌ ಚಂದ್ ಅವರ ಹೆಸರನ್ನು ಇಡುವುದು ಸೂಕ್ತವಾಗಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು