ಶನಿವಾರ, ಫೆಬ್ರವರಿ 29, 2020
19 °C

ಮನ್‌ಪ್ರೀತ್‌ಗೆ ಎಫ್‌ಐಎಚ್‌ ಪ್ರಶಸ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಸೆನ್: ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಅವರು ಎಫ್‌ಐಎಚ್‌ ವರ್ಷದ ಆಟಗಾರ ಪ್ರಶಸ್ತಿ ಗಳಿಸಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಆಟಗಾರನಾಗಿದ್ದಾರೆ.

ಅಂತರರಾಷ್ಟ್ರೀಯ ಹಾಕಿ ಫೆಡರೇಷನ್ 1999ರಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ಆಗಿನಿಂದಲೂ ಭಾರತ ಪುರುಷರ ತಂಡದ ಯಾವುದೇ ಆಟಗಾರನಿಗೂ ಲಭಿಸಿರಲಿಲ್ಲ.

ಭಾರತದ ಯುವ ಮಿಡ್‌ಫೀಲ್ಡರ್ ವಿವೇಕ್ ಸಾಗರ್‌ ಸಾದ್ ಮತ್ತು ಮಹಿಳಾ ತಂಡದ ಸ್ಟ್ರೈಕರ್ ಲಾಲ್‌ರೆಮಿಸಿಯಾಮಿ ಉದಯೋನ್ಮುಖ ತಾರೆ ಗೌರವ ಗಳಿಸಿದ್ದಾರೆ.

ಮನ್‌ಪ್ರೀತ್ ಎರಡು ಒಲಿಂಪಿಕ್ಸ್‌ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಮುಂಬರುವ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಅವರೇ ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು