ಶನಿವಾರ, ಮಾರ್ಚ್ 6, 2021
18 °C

ವಿಶ್ವ ಚಾಂಪಿಯನ್‌ಷಿಪ್‌ಗೆ ಮರಿನ್‌ ಇಲ್ಲ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಮ್ಯಾಡ್ರಿಡ್‌: ಸ್ಪೇನ್‌ನ ಬ್ಯಾಡ್ಮಿಂಟನ್‌ ತಾರೆ ಕ್ಯಾರೋಲಿನ್‌ ಮರಿನ್‌ ಅವರು ಈ ಸಲದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಆಡುತ್ತಿಲ್ಲ.

ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ 25 ವರ್ಷದ ಮರಿನ್‌, ಇದರಿಂದ ಇನ್ನೂ ಪೂರ್ಣವಾಗಿ ಗುಣಮುಖರಾಗಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ.

ಸ್ಪೇನ್‌ನ ಆಟಗಾರ್ತಿ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. 2016ರ ರಿಯೊ ಒಲಿಂಪಿಕ್ಸ್‌ನಲ್ಲೂ ಚಿನ್ನದ ಪದಕ ಜಯಿಸಿ ದಾಖಲೆ ನಿರ್ಮಿಸಿದ್ದರು.

‘ಮೊಣಕಾಲಿನಲ್ಲಿ ಈಗ ಮೊದಲಿನಷ್ಟು ನೋವಿಲ್ಲ. ಹೀಗಿದ್ದರೂ ಮುನ್ನೆಚ್ಚರಿಕೆಯ ದೃಷ್ಟಿಯಿಂದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದೇನೆ. ಸೆಪ್ಟೆಂಬರ್‌ನಲ್ಲಿ ನಡೆಯುವ ಟೂರ್ನಿಗಳಲ್ಲಿ ಕಣಕ್ಕಿಳಿಯುತ್ತೇನೆ’ ಎಂದಿದ್ದಾರೆ.

ವಿಶ್ವ ಚಾಂಪಿಯನ್‌ಷಿಪ್‌, ಆಗಸ್ಟ್‌ 19ರಿಂದ 25ರವರೆಗೆ ಸ್ವಿಟ್ಜರ್‌ಲೆಂಡ್‌ನ ಬಾಸೆಲ್‌ನಲ್ಲಿ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.