ಗುರುವಾರ , ಜುಲೈ 7, 2022
20 °C

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌: ಆರನೇ ಚಿನ್ನದ ಪದಕದ ಮೇಲೆ ಮೇರಿ ಕೋಮ್ ಕಣ್ಣು

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ಇಲ್ಲಿ ಭಾನುವಾರ ನಡೆಯಲಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಲು ಪಣತೊಟ್ಟಿದ್ದಾರೆ.

ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಲಿದ್ದಾರೆ.

51 ಕೆಜಿ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಕಜಕಸ್ತಾನದ ನಜಿಮ್‌ ಕಿಜೈಬಿ ವಿರುದ್ಧ ಮೇರಿ ಕೋಮ್‌ ಹೋರಾಡಲಿದ್ದಾರೆ.

ಗುರುವಾರ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ಮಂಗೋಲಿಯಾದ ಲುಟ್ಸೈಖನ್ ಅಲ್ಟಂನ್ಸೆನ್ಸೆಗ್‌ ಅವರನ್ನು ಮೇರಿ 4–1ರಲ್ಲಿ ಮಣಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು