ಬುಧವಾರ, ಮಾರ್ಚ್ 22, 2023
23 °C

ಹಾಕಿ ವಿಶ್ವಕಪ್‌ಗೆ ಅದ್ದೂರಿ ಚಾಲನೆ: ಮೊದಲ ಪಂದ್ಯದಲ್ಲಿ ಭಾರತಕ್ಕೆ ಸ್ಪೇನ್ ಸವಾಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಟಕ್‌, ಒಡಿಶಾ: ಪುರುಷರ ಹಾಕಿ ವಿಶ್ವಕಪ್ ಟೂರ್ನಿಗೆ ಇಲ್ಲಿಯ ಬಾರಾಬತಿಯ ಸುಂದರ ಕ್ರೀಡಾಂಗಣದಲ್ಲಿ ಬುಧವಾರ ಅದ್ದೂರಿ ಚಾಲನೆ ಸಿಕ್ಕಿತು. ದೇಶ, ವಿದೇಶಗಳಿಂದ ಸಾವಿರಾರು ಅಭಿಮಾನಿಗಳು ಈ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾದರು.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್‌ ಠಾಕೂರ್‌, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌, ಅಂತರರಾಷ್ಟ್ರೀಯ ಹಾಕಿ ಫೆಡರೇಷನ್ ಅಧ್ಯಕ್ಷ ತಯ್ಯಬ್ ಇಕ್ರಂ, ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟಿರ್ಕಿ ಸಮಾರಂಭದಲ್ಲಿ ಹಾಜರಿದ್ದು, 16 ತಂಡಗಳನ್ನು ಬರಮಾಡಿಕೊಂಡರು.

ಒಂದು ತಾಸಿಗಿಂತ ಹೆಚ್ಚು ಕಾಲ ನಡೆದ ಸಮಾರಂಭದಲ್ಲಿ ಬಾಲಿವುಡ್‌ ನಟ ರಣವೀರ್ ಸಿಂಗ್‌ ಸೇರಿದಂತೆ ನೃತ್ಯಪಟುಗಳು, ಗಾಯಕರು ಸುಂದರ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ದೊಡ್ಡ ಪರದೆಗಳ ಮೂಲಕ ಸಮಾರಂಭದ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು.

ಟೂರ್ನಿಯ ಪಂದ್ಯಗಳು ಶುಕ್ರವಾರದಿಂದ ಆರಂಭವಾಗಲಿವೆ. 13ರಂದು ಮೊದಲ ಪಂದ್ಯದಲ್ಲಿ ಅರ್ಜೆಂಟೀನಾ– ದಕ್ಷಿಣ ಆಫ್ರಿಕಾ ಸೆಣಸಲಿವೆ. ಅದೇ ದಿನ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಸ್ಪೇನ್ ಎದುರು ಆಡಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು