ಮಂಗಳವಾರ, ಸೆಪ್ಟೆಂಬರ್ 28, 2021
24 °C

ಉದ್ದೀಪನಾ ಮದ್ದು ಸೇವನೆ ಸಾಬೀತು: ಮೈಕೆಲೆ ಲೀ ಮೇಲೆ ಎರಡು ವರ್ಷ ನಿಷೇಧ

ಎಪಿ Updated:

ಅಕ್ಷರ ಗಾತ್ರ : | |

ಲಂಡನ್‌: ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ್ದು ಸಾಬೀತಾಗಿರುವ ಕಾರಣ ಟ್ರಿನಿಡಾಡ್‌ ಮತ್ತು ಟೊಬಾಗೊದ ಅಥ್ಲೀಟ್‌ ಮೈಕೆಲೆ ಲೀ ಅಹಿಯೆ ಮೇಲೆ ಮಂಗಳವಾರ ಎರಡು ವರ್ಷ ನಿಷೇಧ ಹೇರಲಾಗಿದೆ.

ನಿಷೇಧವು 2019ರ ಏಪ್ರಿಲ್‌ 19ರಿಂದಲೇ ಜಾರಿಯಾಗಲಿದೆ ಎಂದು ಅಥ್ಲೆಟಿಕ್ಸ್‌ ಇಂಟಿಗ್ರಿಟಿ ಯೂನಿಟ್‌ ತಿಳಿಸಿದೆ.

ಮೈಕೆಲೆ ಅವರು 2018ರಲ್ಲಿ ಆಸ್ಟ್ರೇಲಿಯಾದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದಿದ್ದ ಮಹಿಳೆಯರ 100 ಮೀಟರ್ಸ್‌ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು. ಹೋದ ವರ್ಷ ನಡೆದಿದ್ದ ಪಾನ್‌ ಅಮೆರಿಕ ಕ್ರೀಡಾಕೂಟದಲ್ಲಿ ಬೆಳ್ಳಿಯ ಪದಕ ಜಯಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು