ಸೋಮವಾರ, ಆಗಸ್ಟ್ 15, 2022
26 °C

ದಿಗ್ಗಜ ಅಥ್ಲೀಟ್ ಮಿಲ್ಕಾ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ಐಸಿಯುಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಭಾರತದ ದಿಗ್ಗಜ ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಆರೋಗ್ಯ ಸ್ಥಿತಿ ಮತ್ತೊಮ್ಮೆ ಗಂಭೀರವಾಗಿದ್ದು, ಪಿಜಿಐಎಂಇಆರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ದಾಖಲು ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಶುಕ್ರವಾರ ತಿಳಿಸಿವೆ.

91 ವರ್ಷದ ಮಿಲ್ಕಾ ಸಿಂಗ್ ಅವರಲ್ಲಿ ಮತ್ತೆ ಜ್ವರ ಕಾಣಿಸಿಕೊಂಡಿದ್ದು, ಆಮ್ಲಜನಕ ಪ್ರಮಾಣವು ಇಳಿಕೆಯಾಗಿದೆ.

ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಬುಧವಾರದಂದು ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.

ವೈದ್ಯರ ತಂಡ ಮಿಲ್ಕಾ ಸಿಂಗ್ ಅವರ ಆರೋಗ್ಯ ಸ್ಥಿತಿಯನ್ನು ನಿಗಾ ವಹಿಸುತ್ತಿದೆ. ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿತ್ತು. ಆಮ್ಲಜನಕ ಪ್ರಮಾಣವು ಕಡಿಮೆಯಾಗಿದೆ. ವೈದ್ಯರ ತಂಡವು ನಿಗಾ ವಹಿಸುತ್ತಿದೆ ಎಂದು ಪಿಜಿಐಎಂಆರ್ ಮೂಲಗಳು ತಿಳಿಸಿವೆ.

ಮಿಲ್ಕಾ ಸಿಂಗ್ ಅವರ ಪತ್ನಿ, ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಕೋವಿಡ್-19ಗೆ ಸಂಬಂಧಿಸಿದ ತೊಂದರೆಗಳಿಂದಾಗಿ ಭಾನುವಾರ ನಿಧನರಾಗಿದ್ದರು. ಅವರಿಗೆ 85 ವರ್ಷವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು