ಶನಿವಾರ, ಜೂನ್ 6, 2020
27 °C

ವಿದೇಶಿ ಕೋಚ್‌ಗಾಗಿ ವೇಟ್‌ಲಿಫ್ಟರ್ ಮೀರಾಬಾಯಿ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಗಾಯದ ಸಮಸ್ಯೆಯಿಂದ ಹೊರಬಂದು ಸಿದ್ಧತೆ ನಡೆಸಲು ವಿದೇಶಿ ತಜ್ಞ ಸ್ಟ್ರೇಂಥ್ ಮತ್ತು ಕಂಡಿಷನಿಂಗ್ ತರಬೇತುದಾರರನ್ನು ತಮಗಾಗಿ ನೇಮಕ ಮಾಡಬೇಕು ಎಂದು ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಮನವಿ ಮಾಡಿದ್ದಾರೆ.

ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆ (ಟಾಪ್ಸ್‌)ಯಡಿಯಲ್ಲಿ ಅವರು ಈ ಮನವಿ ಸಲ್ಲಿಸಿದ್ದಾರೆ. ಅದನ್ನು ಭಾರತ ವೇಟ್‌ಲಿಫ್ಟಿಂಗ್ ಫೆಡರೇಷನ್‌, ಭಾರತೀಯ ಕ್ರೀಡಾ ಪ್ರಾಧಿಕಾರಿಕ್ಕೆ ಕಳುಹಿಸಿದೆ.

‘ವೇಟ್‌ ಲಿಫ್ಟಿಂಗ್‌ನಲ್ಲಿ ಗಾಯಗೊಳ್ಳುವ ಸಾಧ್ಯತೆಗಳು ಹೆಚ್ಚು. ಟಾಪ್ಸ್‌ ಸಮಿತಿಗೆ ಲಾಕ್‌ಡೌನ್‌ ಮುಂಚೆಯೇ ನಾನು ಮನವಿ ಮಾಡಿದ್ದೆ. ವಿಶೇಷ ಕೋಚ್ ಒಬ್ಬರ ಅಗತ್ಯವಿದೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು