ಕೆಂಟೊ ಮೊಮೊಟಾಗೆ ಕೋವಿಡ್: ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಜಪಾನ್ ಹಿಂದಕ್ಕೆ

ಟೋಕಿಯೊ: ವಿಶ್ವದ ಅಗ್ರಮಾನ್ಯ ಬ್ಯಾಡ್ಮಿಂಟನ್ ಆಟಗಾರ ಕೆಂಟೊ ಮೊಮೊಟಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಜಪಾನ್ ಈ ತಿಂಗಳ ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿದಿದೆ.
ಈ ವಿಷಯವನ್ನು ಜಪಾನ್ ಬ್ಯಾಡ್ಮಿಂಟನ್ ಸಂಸ್ಥೆ ತಿಳಿಸಿದೆ. ಒಂದು ವರ್ಷದ ಹಿಂದೆ ಮಲೇಷಿಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಆಡಿ ಕ್ವಾಲಾಲಂಪುರ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಮೊಟಾ, ಥಾಯ್ಲೆಂಡ್ನ ಟೂರ್ನಿಯ (ಜನವರಿ 19 ರಿಂದ 24)ಮೂಲಕ ಪುನರಾಗಮನಕ್ಕೆ ಮುಂದಾಗಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.