ಶನಿವಾರ, ಅಕ್ಟೋಬರ್ 8, 2022
21 °C

ರ‍್ಯಾಪಿಡ್‌ ಚೆಸ್‌ ಟೂರ್ನಿ: ಅನಿಷ್ಕಾ ಬಿಯಾನಿಗೆ ಚಿನ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈನ ಆರು ವರ್ಷದ ಬಾಲಕಿ ಅನಿಷ್ಕಾ ಬಿಯಾನಿ ಅವರು ಮಲೇಷ್ಯಾದ ಕ್ವಾಲಾಲಂಪುರದಲ್ಲಿ ಭಾನುವಾರ ಕೊನೆಗೊಂಡ ರ‍್ಯಾಪಿಡ್‌ ಚೆಸ್‌ ಟೂರ್ನಿಯಲ್ಲಿ ಚಿನ್ನ ಗೆದ್ದುಕೊಂಡರು.

ಆರು ವರ್ಷದೊಳಗಿನವರ ವಿಭಾಗದಲ್ಲಿ ಸ್ಪರ್ಧಿಸಿದ ಅವರು ಆರು ಸುತ್ತುಗಳಲ್ಲಿ ನಾಲ್ಕು ಪಾಯಿಂಟ್‌ ಸಂಗ್ರಹಿಸಿ ಅಗ್ರಸ್ಥಾನ ಪಡೆದರು. ಎಂಟು ರಾಷ್ಟ್ರಗಳ ಸ್ಪರ್ಧಿಗಳು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

ಅನಿಷ್ಕಾ ಅವರು ಈ ವರ್ಷದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಅಖಿಲ ಭಾರತ ಫಿಡೆ ರೇಟಿಂಗ್‌ ಚೆಸ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು