ಶನಿವಾರ, ಜುಲೈ 31, 2021
20 °C

ಅತಿರಂಜಿತ ಸುದ್ದಿ: ಸುಶೀಲ್ ತಾಯಿ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಯುವ ಕುಸ್ತಿಪಟುವಿನ ಕೊಲೆ ಆರೋಪಿ ಎಂದು ಬಿಂಬಿಸಿ ಸುಶೀಲ್ ಕುಮಾರ್ ಅವರಿಗೆ ಸಂಬಂಧಿಸಿದ ಅತಿರಂಜಿತ ವರದಿಗಳನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ಸುಶೀಲ್ ಅವರ ತಾಯಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಒಲಿಂಪಿಯನ್ ಸುಶೀಲ್ ಕುಮಾರ್ ಮತ್ತು ಸಹಚರರನ್ನು ಬಂಧಿಸಲಾಗಿದೆ. ಎಫ್‌ಐಆರ್ ಕೂಡ ದಾಖಲಾಗಿದೆ.

ಆದರೆ ಕೊಲೆಯ ನಂತರ ಮಾಧ್ಯಮಗಳು ಪ್ರಕಟಿಸಿದ ವರದಿಗಳನ್ನು ಉಲ್ಲೇಖಿಸಿ ಕಮಲಾದೇವಿ ಮತ್ತು ಕಾನೂನು ವಿದ್ಯಾರ್ಥಿ ಶ್ರೀಕಾಂತ್ ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಡಿ.ಎನ್‌.ಪಟೇಲ್ ಮತ್ತು ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ ಶುಕ್ರವಾರ ವಿಚಾರಣೆ ನಡೆಸಲಿದೆ.

ಇವನ್ನೂ ಓದಿತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು