ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ ಕ್ಷೇತ್ರದಲ್ಲಿ 2 ‘ಸಖಿ’ ಮತಗಟ್ಟೆ

ಮಹಿಳಾ ಮತದಾರರನ್ನು ಹೆಚ್ಚು ಆಕರ್ಷಿಸಲು ಕ್ರಮ
Last Updated 12 ಮೇ 2018, 9:40 IST
ಅಕ್ಷರ ಗಾತ್ರ

ಯಲ್ಲಾಪುರ: ಭಾರತದ ಚುನಾವಣಾ ಆಯೋಗ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರೇ ಒಳಗೊಂಡ ಸಖಿ ಮತಗಟ್ಟೆಯನ್ನು ಕ್ಷೇತ್ರದ ಎರಡು ಕಡೆ ತೆರೆಯಲಾಗಿದೆ.

ಪಟ್ಟಣದಲ್ಲಿ ಮಹಿಳಾ ಮಂಡಳ ಹತ್ತಿರದ ಕೆಜಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಮತಗಟ್ಟೆ ಸಂಖ್ಯೆ 19) ಹಾಗೂ ತಾಲ್ಲೂಕಿನ ಸವಣಗೇರಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ (ಮತಗಟ್ಟೆ ಸಂಖ್ಯೆ 20) ಸಖಿ ಮತಗಟ್ಟೆಗಳನ್ನಾಗಿ ಪರಿವರ್ತಿಸಲಾಗಿದೆ.

ಮತಗಟ್ಟೆ ಸಂಪೂರ್ಣ ಗುಲಾಬಿ ಬಣ್ಣದಿಂದ ಗಮನ ಸೆಳೆಯುತ್ತಿದೆ.  ಮತಗಟ್ಟೆ ಅಧಿಕಾರಿ, ಚುನಾವಣಾ ಸಿಬ್ಬಂದಿ ಕೂಡ ಗುಲಾಬಿ ಬಣ್ಣದ ವಸ್ತ್ರಗಳನ್ನು ಧರಿಸುತ್ತಾರೆ.

ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲರೂ ಮಹಿಳೆಯರೇ ಇರುತ್ತಾರೆ. ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನೆ ಕರ್ತವ್ಯಕ್ಕೆ ನೇಮಿಸಲಾಗುವುದು.

‘ಮಹಿಳೆಯರನ್ನು ಸಬಲೀಕರಣ ಗೊಳಿಸಿ ಮತದಾನ ಪ್ರಕ್ರಿಯೆಯಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಮಹಿಳಾ ಮತದಾರರು ಹೆಚ್ಚಿರುವ ಮತಗಟ್ಟೆಗಳಲ್ಲಿ ರಾಜ್ಯದಲ್ಲೆಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ’ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT