ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಸೈಕ್ಲಿಂಗ್‌: ಕರ್ನಾಟಕಕ್ಕೆ ಒಲಿದ ನಾಲ್ಕು ಪದಕ

Last Updated 21 ನವೆಂಬರ್ 2018, 18:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕದ ಸೈಕ್ಲಿಸ್ಟ್‌ಗಳು ಹರಿಯಾಣದ ಕುರುಕ್ಷೇತ್ರದಲ್ಲಿ ಬುಧವಾರ ಆರಂಭವಾದ 23ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ನಾಲ್ಕು ಪದಕಗಳನ್ನು ಜಯಿಸಿದ್ದಾರೆ.

14 ವರ್ಷದ ಒಳಗಿನವರ ಬಾಲಕರ ವಿಭಾಗದ 10 ಕಿ.ಮೀ. ವೈಯಕ್ತಿಕ ಟೈಮ್‌ ಟ್ರಯಲ್ಸ್‌ನಲ್ಲಿ ವಿಜಯಪುರದ ಸರ್ಕಾರಿ ಸೈಕ್ಲಿಂಗ್ ಕ್ರೀಡಾನಿಲಯದ ಸಂಪತ್‌ ಪಾಸ್ಮೆಲ 14 ನಿಮಿಷ 46.76 ಸೆಕೆಂಡುಗಳಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಪಡೆದರು. ಇದೇ ಸ್ಪರ್ಧೆಯಲ್ಲಿ ಪ್ರತಾಪ್‌ ಪಡಚಿ 14 ನಿಮಿಷ 50.31 ಸೆ. ಗಳಲ್ಲಿ ಗುರಿ ತಲುಪಿ ಕಂಚು ಜಯಿಸಿದರು.

ಇದೇ ವಯೋಮಾನ ಬಾಲಕಿಯರ ವಿಭಾಗದಲ್ಲಿ ವಿಜಯಪುರ ಸರ್ಕಾರಿ ಸೈಕ್ಲಿಂಗ್‌ ಕ್ರೀಡಾನಿಲಯದ ಪಾಯಲ್‌ ಚವ್ಹಾಣ್‌ 17 ನಿಮಿಷ 9.49 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಇದೇ ಸ್ಪರ್ಧೆಯಲ್ಲಿ ಅಕ್ಷತಾ ಭೂತನಾಳ ಕಂಚು ಪಡೆದರು. ಗುರಿ ಮುಟ್ಟಲು ಅವರು 17 ನಿಮಿಷ 30.02 ಸೆಕೆಂಡ್‌ ತೆಗೆದುಕೊಂಡರು.

ನಾಲ್ಕು ದಿನ ನಡೆಯಲಿರುವ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯದ 42 ಸೈಕ್ಲಿಸ್ಟ್‌ಗಳು ಭಾಗವಹಿಸಿದ್ದಾರೆ. ಕರ್ನಾಟಕ ತಂಡ ರಾಷ್ಟ್ರೀಯ ಟೂರ್ನಿಯಲ್ಲಿ ಸತತ ನಾಲ್ಕು ಬಾರಿ ಸಮಗ್ರ ಪ್ರಶಸ್ತಿ ಜಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT