ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ ಮುಂದಕ್ಕೆ

Last Updated 29 ಮಾರ್ಚ್ 2020, 19:30 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ರಾಷ್ಟ್ರೀಯ ಸೀನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ ಅನ್ನು ಕೊರೊನಾ ಭೀತಿಯಿಂದಾಗಿ ಮುಂದೂಡಲಾಗಿದೆ.

ಭಾರತ ಅಥ್ಲೆಟಿಕ್‌ ಫೆಡರೇಷನ್‌ (ಎಎಫ್‌ಐ) ಭಾನುವಾರ ಈ ನಿರ್ಧಾರ ಕೈಗೊಂಡಿದೆ.

ಚಾಂಪಿಯನ್‌ಷಿಪ್‌ ಜೂನ್‌ 25ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಹಲವು ಅಥ್ಲೀಟ್‌ಗಳಿಗೆ ಇದು ವೇದಿಕೆಯಾಗಿತ್ತು.

‘ಮೇ ಅಥವಾ ಜೂನ್‌ ವೇಳೆಗೆ ಕೊರೊನಾ ಬಿಕ್ಕಟ್ಟು ಬಗೆಹರಿದರೆ ಆಗಸ್ಟ್‌ ಅಂತ್ಯದಲ್ಲಿ ಚಾಂಪಿಯನ್‌ಷಿಪ್‌ ಆಯೋಜಿಸುತ್ತೇವೆ’ ಎಂದು ಭಾರತದ ಸಹಾಯಕ ಮುಖ್ಯ ಕೋಚ್‌ ರಾಧಾಕೃಷ್ಣನ್‌ ನಾಯರ್‌ ತಿಳಿಸಿದ್ದಾರೆ.

‘ಒಲಿಂಪಿಕ್‌ ಕ್ರೀಡಾಕೂಟವನ್ನು 2021ಕ್ಕೆ ಮುಂದೂಡಲಾಗಿದೆ. ಜೊತೆಗೆ ಕೆಲ ಅಂತರರಾಷ್ಟ್ರೀಯ ಕೂಟಗಳೂ ಮುಂದಕ್ಕೆ ಹೋಗಿವೆ. ಹೀಗಾಗಿ 2020ರ ದೇಶಿ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ಬದಲಿಸಿ ಹೊಸ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕಿದೆ. ಈ ಕೆಲಸವನ್ನು ಯೋಜನಾ ಸಮಿತಿ ಮಾಡಲಿದೆ’ ಎಂದು ಎಎಫ್‌ಐ ಅಧ್ಯಕ್ಷ ಆದಿಲ್‌ ಸುಮರಿವಾಲಾ ಹೇಳಿದ್ದಾರೆ.

‘ಹೊಸದಾಗಿ ತರಬೇತಿ ಕಾರ್ಯಕ್ರಮಗಳನ್ನು ರೂ‍ಪಿಸುವಂತೆಯೂ ಕೋಚ್‌ಗಳಿಗೆ ಸೂಚನೆ ನೀಡಿದ್ದೇವೆ’ ಎಂದೂ ಅವರು ನುಡಿದಿದ್ದಾರೆ.

ಆಗಸ್ಟ್‌ 16ರಿಂದ 19ರವರೆಗೆ ಚೆನ್ನೈಯಲ್ಲಿ ನಿಗದಿಯಾಗಿದ್ದ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ ಅನ್ನೂ ಮುಂದಕ್ಕೆ ಹಾಕಲು ತೀರ್ಮಾನಿಸಲಾಗಿದೆ.

ಮಾರ್ಚ್‌ನಲ್ಲಿ ನಡೆಯಬೇಕಿದ್ದ ಇಂಡಿಯನ್‌ ಗ್ರ್ಯಾನ್‌ ಪ್ರೀ ಸೀರಿಸ್ ಮತ್ತು ಫೆಡರೇಷನ್‌ ಕಪ್‌ ಸೀನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ಗಳು ಕೊರೊನಾ ಭೀತಿಯಿಂದಾಗಿ ಮುಂದೂಡಲ್ಪಟ್ಟಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT