ಶುಕ್ರವಾರ, ಫೆಬ್ರವರಿ 28, 2020
19 °C

ಅಥ್ಲೆಟಿಕ್ಸ್: ಕುರಿಗಾಹಿಗಳಿಗೆ ಪ್ರಥಮ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು: ಈಚೆಗೆ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನಲ್ಲಿ ತಾಲ್ಲೂಕಿನ ಬಿ.ಜಿ.ಹಳ್ಳಿಯ ಹನುಮಂತಪ್ಪ ಹಾಗೂ ಶಿವಲಿಂಗಪ್ಪ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.

ಕುರಿಗಾಹಿ ಹನುಮಂತಪ್ಪ 10 ಕಿ.ಮೀ ಓಟದಲ್ಲಿ ಪ್ರಥಮ ಸ್ಥಾನ, 5 ಕಿ.ಮೀ ಓಟದಲ್ಲಿ ದ್ವಿತೀಯ ಸ್ಥಾನ, 5 ಕಿ.ಮೀ ನಡಿಗೆಯಲ್ಲಿ ದ್ವಿತೀಯ ಸ್ಥಾನ ಹಾಗೂ 400/400 ಮೀ ರಿಲೇನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಿವಲಿಂಗಪ್ಪ ಅವರು 5 ಕಿ.ಮೀ ನಡಿಗೆಯಲ್ಲಿ ಪ್ರಥಮ ಸ್ಥಾನ
ಪಡೆದಿದ್ದಾರೆ.

‘ಇಂಡಿಯನ್ ಮಾಸ್ಟರ್ ಅಥ್ಲೆಟಿಕ್ಸ್ ಸಂಸ್ಥೆ’ ನೇತೃತ್ವದಲ್ಲಿ ಕೂಟ ಹಮ್ಮಿಕೊಳ್ಳಲಾಗಿತ್ತು. ಕುರಿಗಾಹಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡಲು ಕ್ರೀಡಾ ಪ್ರೇಮಿಗಳು ಸಹಕಾರ ನೀಡಬೇಕು ಎಂದು ಸಂಸ್ಥೆಯು ಮನವಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು