ಬುಧವಾರ, ಸೆಪ್ಟೆಂಬರ್ 29, 2021
20 °C

ತಲೆಗೆ ಶೂಟ್ ಮಾಡಿಕೊಂಡು ದುರಂತ ಅಂತ್ಯ ಕಂಡ ಶೂಟರ್

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗರ್: ರಾಷ್ಟ್ರೀಯ ಮಟ್ಟದ ಶೂಟರ್ ಕ್ರೀಡಾಪಟು ನಮನ್‌ವೀರ್ ಸಿಂಗ್ ಬ್ರಾರ್ (28) ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮೋಹಾಲಿಯ ಸೆಕ್ಟರ್ 71 ಮನೆಯಲ್ಲಿ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದ್ದು, ಆಕಸ್ಮಿಕವಾಗಿ ಗುಂಡು ಸಿಡಿದಿದೆಯಾ ಎಂಬುದನ್ನೂ ತನಿಖೆ ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ನಂತರ ನಿಖರ ಮಾಹಿತಿ ದೊರೆಯಲಿದೆ’ ಎಂದು ಮೋಹಾಲಿ ಡಿಎಸ್‌ಪಿ ಗುರ್‌ಶೇರ್ ಸಿಂಗ್ ಸಂಧು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ದಕ್ಷಿಣ ಕೊರಿಯಾದಲ್ಲಿ ನಡೆದಿದ್ದ ಜಾಗತಿಕ ವಿಶ್ವವಿದ್ಯಾಲಯಗಳ ಡಬಲ್‌ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ನಮನ್‌ವೀರ್‌ ಕಂಚಿನ ಪದಕ ಗೆದ್ದಿದ್ದರು. ಐಎಸ್‌ಎಸ್‌ಎಫ್‌ ಅರ್ಹತಾ ಪರೀಕ್ಷೆಯಲ್ಲೂ ಕೂಡ ಅವರು ಭಾಗವಹಿಸಿದ್ದರು.

ಇದನ್ನೂ ಓದಿ: ಆಸ್ಕರ್ ಫೆರ್ನಾಂಡಿಸ್‌: ಧರ್ಮ, ಜಾತಿ ಮೀರಿದ ರಾಜಕಾರಣಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು