ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಕ್ರೀಡಾದಿನ ಆಚರಣೆ: ಕೋಚ್ ಕಾಶೀನಾಥ ನಾಯ್ಕಗೆ ಸನ್ಮಾನ

Last Updated 29 ಆಗಸ್ಟ್ 2021, 6:10 IST
ಅಕ್ಷರ ಗಾತ್ರ

ಶಿರಸಿ: ರಾಷ್ಟ್ರೀಯ ಕ್ರೀಡಾದಿನದ ಅಂಗವಾಗಿ ರಾಷ್ಟ್ರೀಯ ಸೇನಾ ಅಕಾಡೆಮಿಯ ಜಾವೆಲಿನ್ ಕೋಚ್ ಕಾಶೀನಾಥ ನಾಯ್ಕ ಅವರನ್ನುಕ್ರೀಡಾ ಇಲಾಖೆ ವತಿಯಿಂದ ಭಾನುವಾರ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಕಾಶೀನಾಥ ನಾಯ್ಕ, ಕ್ರೀಡಾ ಸಾಧಕನ ಜತೆ ತರಬೇತುದಾರರನ್ನೂ ಗುರುತಿಸಿದ್ದು ಅವಿಸ್ಮರಣೀಯ ಎಂದರು.

ಸೇನೆಯಲ್ಲಿ ನಿವೃತ್ತಿಯಾದ ಬಳಿಕ ಶಿರಸಿಯಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಗುರಿ ಇದೆ. ಖೇಲೊ ಇಂಡಿಯಾ ಸೇರಿದಂತೆ ಕ್ರೀಡೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ' ಎಂದರು.

'ವಿದೇಶಿ ಕೋಚ್ ಗಳಿಗೆ ಸಿಕ್ಕ ಪ್ರೋತ್ಸಾಹ ಸ್ವದೇಶಿ ಕೋಚ್ ಗಳಿಗೆ ಮೊದಲು ಸಿಗುತ್ತಿರಲಿಲ್ಲ ಎಂಬ ಬೇಸರವಿತ್ತು. ಈಗ ಬೆಂಬಲ ಸಿಗುವ ಭರವಸೆ ಮೂಡಿದೆ' ಎಂದರು.

ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿದೇಶಿ ಕೋಚ್ ಗಳ ಬದಲು ಸ್ವದೇಶಿ ಕೋಚ್ ನೇಮಕಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇವೆ ಎಂದರು.

ಸಾಮರ್ಥ್ಯದ ಕೌಶಲ್ಯ ವೃದ್ಧಿಸಿಕೊಳ್ಳುವತ್ತ ದೃಷ್ಟಿ ನೆಡಬೇಕು. ಕಾಶೀನಾಥ ನಾಯ್ಕ ಅತ್ಯುತ್ತಮ ಕ್ರೀಡಾಪಟು ಅಗಿರುವ ಜತೆಗೆ ಅತ್ತುತ್ತಮ ಗುರು ಎಂಬುದನ್ನೂ ಸಾಬೀತುಪಡಿಸಿದ್ದಾರೆ ಎಂದರು.

ಸಾಧನೆ ನಿರಂತರವಾಗಿರಲಿ. ಯುವಜನತೆಗೆ ಮಾದರಿ ಆಗಿರುವ ಕಾಶೀನಾಥ ಅವರ ಗರಡಿಯಲ್ಲಿ ಇನ್ನಷ್ಟು ಹೆಚ್ಚು ಕ್ರೀಡಾಪಟುಗಳು ಹೊರಹೊಮ್ಮಲಿ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ಡಿವೈಎಸ್ಪಿ ರವಿ ನಾಯ್ಕ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ, ಕ್ರೀಡಾಧಿಕಾರಿ ಕಿರಣ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT