ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ: ತ್ರಿವರ್ಣ ಧ್ವಜ ಹಿಡಿಯಲಿರುವ ನೀರಜ್‌

7

ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ: ತ್ರಿವರ್ಣ ಧ್ವಜ ಹಿಡಿಯಲಿರುವ ನೀರಜ್‌

Published:
Updated:
Deccan Herald

ನವದೆಹಲಿ: ಇಂಡೊನೇಷ್ಯಾದ ಜಕಾರ್ತದಲ್ಲಿ ನಡೆಯಲಿರುವ 18ನೇ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಈ ವಿಷಯವನ್ನು ಭಾರತ ಒಲಿಂ ಪಿಕ್ಸ್‌ ಸಂಸ್ಥೆಯ (ಐಒಎ) ಅಧ್ಯಕ್ಷ ನರೀಂ ದರ್‌ ಬಾತ್ರಾ ಶುಕ್ರವಾರ ತಿಳಿಸಿದ್ದಾರೆ.

ಈಚೆಗೆ ಆಸ್ಟ್ರೇಲಿಯಾದ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ನೀರಜ್‌ ಚಿನ್ನ ಗೆದ್ದಿದ್ದರು. ಅವರು ಏಷ್ಯನ್‌ ಕೂಟ ದಲ್ಲೂ ಪದಕ ಗೆಲ್ಲುವ ನೆಚ್ಚಿನ ಸ್ಪರ್ಧಿಯಾಗಿದ್ದಾರೆ.

20ರ ಹರೆಯದ ನೀರಜ್‌, ಈ ವರ್ಷದ ಜುಲೈನಲ್ಲಿ ಫಿನ್ಲೆಂಡ್‌ನಲ್ಲಿ ನಡೆ ದಿದ್ದ ಸಾವೋ ಕೂಟದಲ್ಲೂ ಚಿನ್ನದ ಸಾಧನೆ ಮಾಡಿದ್ದರು. ಫೈನಲ್‌ನಲ್ಲಿ ಅವರು 85.69ಮೀಟರ್ಸ್ ದೂರ ಜಾವೆಲಿನ್ ಎಸೆದು ಚೀನಾ ತೈಪೆಯ ಚಾವೊ ಸುನ್‌ ಚೆಂಗ್‌ ಅವರನ್ನು ಹಿಂದಿಕ್ಕಿದ್ದರು.

ಚೋಪ್ರಾ ಕಳೆದ ಮೇ ತಿಂಗಳಲ್ಲಿ ದೋಹಾದಲ್ಲಿ ನಡೆದಿದ್ದ ಡೈಮಂಡ್‌ ಲೀಗ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ 87.43 ಮೀಟರ್ಸ್‌ ಸಾಮರ್ಥ್ಯ ತೋರಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು.

2017ರಲ್ಲಿ ಭುವನೇಶ್ವರದಲ್ಲಿ ನಡೆದಿದ್ದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲೂ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು.

‘ಪಥಸಂಚಲನದಲ್ಲಿ ಧ್ವಜ ಹಿಡಿಯುವ ಗೌರವ ಲಭಿಸಿರುವುದಕ್ಕೆ ತುಂಬಾ ಖುಷಿಯಾಗಿದೆ. ಮಹತ್ವದ ಕೂಟದಲ್ಲಿ ತಂಡವನ್ನು ಮುನ್ನಡೆಸುವ ಅವಕಾಶ ಲಭಿಸಿರುವುದು ಹೆಮ್ಮೆಯಿಂದ ಬೀಗುವಂತೆ ಮಾಡಿದೆ’ ಎಂದು ನೀರಜ್‌ ಖುಷಿ ವ್ಯಕ್ತಪಡಿಸಿದ್ದಾರೆ.

‘ಧ್ವಜ ಹಿಡಿಯುವ ಗೌರವ ನನಗೆ ಲಭಿಸಲಿದೆ ಎಂದು ಖಂಡಿತವಾಗಿಯೂ ಊಹಿಸಿರಲಿಲ್ಲ. ಈ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ’ ಎಂದಿದ್ದಾರೆ.

ಏಷ್ಯನ್‌ ಕೂಟ ಆಗಸ್ಟ್‌ 18 ರಿಂದ ಸೆಪ್ಟೆಂಬರ್ 2 ರವರೆಗೆ  ಜಕಾರ್ತ ಮತ್ತು ಪಾಲೆಂಬಾಂಗ್‌ ನಗರಗಳಲ್ಲಿ ಜರುಗಲಿದೆ. ಇದರಲ್ಲಿ 45 ರಾಷ್ಟ್ರಗಳ 11 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !