ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಟ್‌ಬಾಲ್‌: ಕರ್ನಾಟಕಕ್ಕೆ ಬೆಳ್ಳಿ

Last Updated 9 ಡಿಸೆಂಬರ್ 2018, 19:26 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಬಾಲಕಿಯರ ತಂಡದವರು ಹಿಮಾಚಲ ಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಸಬ್‌ಜೂನಿಯರ್‌ ನೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿಯ ಪದಕ ಜಯಿಸಿದ್ದಾರೆ. ಬಾಲಕರ ತಂಡದವರು ಕಂಚಿನ ಸಾಧನೆ ಮಾಡಿದ್ದಾರೆ.

ಭಾನುವಾರ ನಡೆದ ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಕರ್ನಾಟಕ 21–28 ಪಾಯಿಂಟ್ಸ್‌ನಿಂದ ಹರಿಯಾಣ ಎದುರು ಸೋತಿತು. ಇದಕ್ಕೂ ಮೊದಲು ನಡೆದಿದ್ದ ಸೆಮಿಫೈನಲ್‌ನಲ್ಲಿ ರಾಜ್ಯ ತಂಡ 38–20 ಪಾಯಿಂಟ್ಸ್‌ನಿಂದ ಮಹಾರಾಷ್ಟ್ರ ತಂಡದ ಎದುರು ಗೆದ್ದಿತ್ತು.

ಬಾಲಕರ ವಿಭಾಗದ ಸೆಮಿಫೈನಲ್‌ನಲ್ಲಿ ಕರ್ನಾಟಕ 38–40 ಪಾಯಿಂಟ್ಸ್‌ನಿಂದ ಉತ್ತರ ಪ್ರದೇಶ ತಂಡಕ್ಕೆ ಮಣಿಯಿತು.

ಹರಿಯಾಣ ತಂಡ ಈ ವಿಭಾಗದ ಚಿನ್ನದ ಪದಕ ತನ್ನದಾಗಿಸಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT