ನವದೆಹಲಿ: ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ನಿಖತ್ ಜರೀನ್ ಮತ್ತು ನೀತು ಗಂಗಾಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ನಿಖತ್ ಮತ್ತು 48 ಕೆ.ಜಿ ವಿಭಾಗದಲ್ಲಿ ನೀತು ಪ್ರಶಸ್ತಿ ಸುತ್ತು ತಲುಪಿದ್ದಾರೆ.
ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಕೊಲಂಬಿಯಾದ ಇಂಗ್ರಿಟೆ ವಲೆನ್ಸಿಯಾ ವಿರುದ್ಧ ನಿಖತ್ 5-0 ಅಂತರದ ಗೆಲುವು ದಾಖಲಿಸಿದರು.
ಮತ್ತೊಂದೆಡೆ ನೀತು ಅವರು 5-2ರ ಅಂತರದಲ್ಲಿ ಕಜಕಿಸ್ತಾನದ ಅಲುವ ಬಲ್ಕಿಬೆಕೋವಾ ವಿರುದ್ಧ ಗೆಲುವು ಸಾಧಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.