ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ನಿಶಿಮೊಟೊ, ಅಕಾನೆಗೆ ಕಿರೀಟ

Last Updated 4 ಸೆಪ್ಟೆಂಬರ್ 2022, 12:41 IST
ಅಕ್ಷರ ಗಾತ್ರ

ಒಸಾಕ, ಜಪಾನ್‌: ಆತಿಥೇಯ ದೇಶದ ಕೆಂಟಾ ನಿಶಿಮೊಟೊ ಮತ್ತು ಅಕಾನೆ ಯಾಮಗುಚಿ ಅವರು ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಮತ್ತು ಮಹಿಳಾ ಸಿಂಗಲ್ಸ್ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದರು.

ಭಾನುವಾರ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ನಿಶಿಮೊಟೊ21-19, 21-23, 21-17ರಿಂದ ಚೀನಾದ ಚೊ ಟಿಯೆನ್ ಚೆನ್ ಅವರನ್ನು ಮಣಿಸಿದರು.

ವಿಶ್ವ ರ‍್ಯಾಂಕಿಂಗ್‌ನಲ್ಲಿ 21ನೇ ಸ್ಥಾನದಲ್ಲಿರುವ ನಿಶಿಮೊಟೊ ಅವರಿಗೆ ಇದು ಮೊದಲ ಅಂತರಾಷ್ಟ್ರೀಯ ಪ್ರಶಸ್ತಿಯಾಗಿದೆ. ಈ ಹಿಂದೆ ಆರು ಟೂರ್ನಿಗಳ ಫೈನಲ್‌ಗಳಲ್ಲಿ ಅವರು ನಿರಾಸೆ ಅನುಭವಿಸಿದ್ದರು.

ಮಹಿಳಾ ಸಿಂಗಲ್ಸ್ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಅಕಾನೆ21-9, 21-15ರಿಂದ ದಕ್ಷಿಣ ಕೊರಿಯಾದ ಆ್ಯನ್ ಸೆ ಯಂಗ್‌ ಸವಾಲು ಮೀರಿದರು. ಇದು ಈ ವರ್ಷ ಅಕಾನೆ ಗೆದ್ದ ಮೂರನೇ ಪ್ರಶಸ್ತಿಯಾಗಿದೆ. ಕಳೆದ ವಾರ ಟೋಕಿಯೊದಲ್ಲಿ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಅವರು ಕಿರೀಟ ಧರಿಸಿದ್ದರು.

ಮಹಿಳಾ ಡಬಲ್ಸ್‌ನಲ್ಲಿ ದಕ್ಷಿಣ ಕೊರಿಯಾದ ಜಿಯೊಂಗ್‌ ನಯುನ್‌–ಕಿಮ್‌ ಹೆ ಜಿಯೊಂಗ್, ಪುರುಷರ ಡಬಲ್ಸ್‌ನಲ್ಲಿ ಚೀನಾದ ಲಿಯಾಂಗ್‌ ವಿಕೆಂಗ್‌–ವಾಂಗ್ ಚಾನ್‌ ಚಾಂಪಿಯನ್ ಆಗಿ ಹೊರಹೊಮ್ಮಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT