ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಬಿರ ಪುನರಾರಂಭಿಸಲು ಸಿದ್ಧರಾಗಿದ್ದೇವೆ: ಎನ್‌ಆರ್‌ಎಐ

Last Updated 18 ಮೇ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ‘ಕೇಂದ್ರ ಸರ್ಕಾರವು ತನ್ನ ಮಾರ್ಗಸೂಚಿಯಲ್ಲಿ ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾಂಗಣಗಳನ್ನು ತೆರೆಯಲು ಅನುಮತಿ ನೀಡಿದೆ. ಶೂಟರ್‌ಗಳ ಹೊರಾಂಗಣ ತರಬೇತಿ ಶಿಬಿರಗಳನ್ನು ಶೀಘ್ರವೇ ಪುನರಾರಂಭಿಸಲು ಉತ್ಸುಕರಾಗಿದ್ದೇವೆ’ ಎಂದು ಭಾರತ ರಾಷ್ಟ್ರೀಯ ರೈಫಲ್‌ ಸಂಸ್ಥೆ (ಎನ್‌ಆರ್‌ಎಐ) ಸೋಮವಾರ ತಿಳಿಸಿದೆ.

ಕೊರೊನಾ ವೈರಾಣುವಿನ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ಲಾಕ್‌ಡೌನ್‌ ಜಾರಿಗೊಳಿಸಿತ್ತು. ಆಗಿನಿಂದಲೂ ಶೂಟಿಂಗ್‌ ಚಟುವಟಿಕೆಗಳು ಸ್ತಬ್ಧಗೊಂಡಿದ್ದವು.

‘ಸಾಧ್ಯವಾದಷ್ಟು ಬೇಗ ತರಬೇತಿ ಶಿಬಿರಗಳನ್ನು ಪುನರಾರಂಭಿಸುವುದು ನಮ್ಮ ಉದ್ದೇಶ. ಇದಕ್ಕಾಗಿ ಸೂಕ್ತ ಯೋಜನೆ ರೂಪಿಸುತ್ತಿದ್ದೇವೆ. ಶೂಟರ್‌ಗಳು, ಕೋಚ್‌ಗಳು ಹಾಗೂ ನೆರವು ಸಿಬ್ಬಂದಿಯ ಸುರಕ್ಷತೆ ಹಾಗೂ ಅಂತರ ಕಾಯ್ದುಕೊಳ್ಳಲೂ ಒತ್ತು ನೀಡುತ್ತೇವೆ’ ಎಂದು ಎನ್‌ಆರ್‌ಎಐ ಅಧ್ಯಕ್ಷ ರಣಿಂದರ್‌ ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT