ಮಂಗಳವಾರ, ಜನವರಿ 21, 2020
27 °C

ಒಲಿಂಪಿಯನ್‌ ಈಜುಪಟು ರೋಲ್ಯಾಂಡ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ಯಾರಿಸ್ (ಎಎಫ್‌ಪಿ): ಒಲಿಂಪಿಕ್ಸ್‌ನಲ್ಲಿ ನಾಲ್ಕು ಬಾರಿ ಚಿನ್ನ ಗೆದ್ದಿದ್ದ ಈಜುಪಟು ಜರ್ಮನಿಯ ರೋಲ್ಯಾಂಡ್ ಮ್ಯಾಥ್ಸ್‌ (69) ಭಾನುವಾರ ನಿಧನರಾದರು. 

1968ರ ಮೆಕ್ಸಿಕೊ ಮತ್ತು 1972ರ ಮ್ಯೂನಿಚ್ ಒಲಿಂಪಿಕ್ಸ್‌ನಲ್ಲಿ ಪೂರ್ವ ಜರ್ಮನಿಯನ್ನು ಪ್ರತಿನಿಧಿಸಿದ್ದ ಅವರು 100 ಮೀಟರ್ಸ್ ಮತ್ತು 200 ಮೀಟರ್ಸ್‌ ಬ್ಯಾಕ್‌ಸ್ಟ್ರೋಕ್‌ ಸ್ಪರ್ಧೆಗ ಳಲ್ಲಿ ಚಾಂಪಿಯನ್ ಆಗಿದ್ದರು. ಈ ಎರಡು ಒಲಿಂಪಿಕ್ಸ್‌ನ ಮೆಡ್ಲೆ ರಿಲೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದ ಅವರು 1972ರ ಫ್ರೀಸ್ಟೈಲ್ ರಿಲೆಯಲ್ಲಿ ಕಂಚಿನ ಪದಕ ಗೆದ್ದಿದ್ದರು. 1976ರ ಮಾಂಟ್ರಿಯಲ್ ಒಲಿಂಪಿಕ್ಸ್‌ನ 100 ಮೀಟರ್ಸ್ ಬ್ಯಾಕ್‌ ಸ್ಟ್ರೋಕ್‌ನಲ್ಲೂ ಕಂಚು ಗಳಿಸಿದ್ದರು. ಮೂರು ಬಾರಿ ವಿಶ್ವ ಚಾಂಪಿಯನ್‌ ಕೂಡ ಆಗಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು