ಶನಿವಾರ, ಜೂನ್ 19, 2021
24 °C

ಬ್ಯಾಡ್ಮಿಂಟನ್ ಆಟಗಾರ್ತಿ ಕ್ಯಾರೊಲಿನಾ ಮರಿನ್‌ಗೆ ಶಸ್ತ್ರಚಿಕಿತ್ಸೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಮ್ಯಾಡ್ರಿಡ್: ಒಲಿಂಪಿಕ್ಸ್ ಚಾಂಪಿಯನ್ ಸ್ಪೇನ್‌ನ ಬ್ಯಾಡ್ಮಿಂಟನ್‌ ಆಟಗಾರ್ತಿ ಕ್ಯಾರೊಲಿನಾ ಮರಿನ್‌ ಅವರು ಎಡ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ.

ಕಳೆದ ವಾರ ನಡೆದ ತರಬೇತಿ ಅವಧಿಯಲ್ಲಿ 27 ವರ್ಷದ ಕ್ಯಾರೊಲಿನಾ ಮರಿನ್‌ ಗಾಯಗೊಂಡಿದ್ದು, ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ.

‘ಇದು ನಾನು ಎದುರಿಸಬೇಕಾದ ಮತ್ತೊಂದು ಸವಾಲಾಗಿದೆ. ಆದರೆ, ನಾನು ಖಂಡಿತವಾಗಿಯೂ ಅದಷ್ಟು ಬೇಗ ಆಟಕ್ಕೆ ಹಿಂತಿರುಗುತ್ತೇನೆ’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಮರಿನ್‌ ಬರೆದಿದ್ದಾರೆ.

ಮೂರು ಬಾರಿಯ ವಿಶ್ವ ಚಾಂಪಿಯನ್ ಆಗಿರುವ ಮರಿನ್‌, 2019ರಲ್ಲಿ ಬಲಗಾಲಿನ ಎಸಿಎಲ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮರಿನ್, ಕಳೆದ ತಿಂಗಳು ಸತತ ಐದನೇ ಬಾರಿಗೆ ಯುರೋಪಿಯನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.

ರಿಯೊ ಡಿ ಜನೈರೊದಲ್ಲಿ ನಡೆದ 2016ರ ಒಲಿಂಪಿಕ್ ಫೈನಲ್‌ನಲ್ಲಿ ಭಾರತದ ಪಿವಿ ಸಿಂಧು ಅವರನ್ನು ಕ್ಯಾರೊಲಿನಾ ಮರಿನ್‌ ಸೋಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು