ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಐಒಎ ಆಸಕ್ತಿ

7

ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಐಒಎ ಆಸಕ್ತಿ

Published:
Updated:

ನವದೆಹಲಿ: ಭಾರತ ಒಲಿಂಪಿಕ್‌ ಸಂಸ್ಥೆ (ಐಒಎ) 2032ರ  ಒಲಿಂಪಿಕ್ಸ್‌ ಕ್ರೀಡಾಕೂಟ ಆಯೋಜಿಸಲು ಒಲವು ತೋರಿದ್ದು, ಬಿಡ್‌ ಸಲ್ಲಿಸಲು ಸಿದ್ಧತೆ ನಡೆಸಿದೆ.

ಅಂತರರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ (ಐಒಸಿ) ಮುಖ್ಯಸ್ಥ ಥಾಮಸ್‌ ಬಾಕ್‌ ಅವರು ಈ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಐಒಎ ಅಧ್ಯಕ್ಷ ನರೀಂದರ್‌ ಬಾತ್ರಾ, ಬಿಡ್‌ ಸಲ್ಲಿಸುವ ಕುರಿತು ಬಾಕ್‌ ಜೊತೆ ಚರ್ಚಿಸಿದ್ದರು. ಇದಕ್ಕೆ ಥಾಮಸ್‌ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

‘2032ರ ಒಲಿಂಪಿಕ್ಸ್‌ಗೆ ಆತಿಥ್ಯವಹಿಸಲು ನಾವು ಸಿದ್ಧರಿದ್ದೇವೆ. ಈ ಕುರಿತು ಐಒಸಿಗೆ ಪತ್ರವನ್ನೂ ಬರೆದಿದ್ದೇವೆ. ಬಿಡ್‌ ಸಮಿತಿ ಜೊತೆ ನಡೆದ ಸಭೆಯಲ್ಲೂ ಇದನ್ನು ಪ್ರಸ್ತಾಪಿಸಿದ್ದು, ಅದಕ್ಕೆ ಸಮಿತಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಸಂಬಂಧ ಸರ್ಕಾರದ ಜೊತೆಯೂ ಮಾತುಕತೆ ನಡೆಸುತ್ತೇವೆ’ ಎಂದು ಐಒಎ ಮಹಾಕಾರ್ಯದರ್ಶಿ ರಾಜೀವ್‌ ಮೆಹ್ತಾ ತಿಳಿಸಿದ್ದಾರೆ.

ಮುಂಬೈ ಮತ್ತು ನವದೆಹಲಿಯಲ್ಲಿ ಸ್ಪರ್ಧೆಗಳನ್ನು ನಡೆಸಲು ಐಒಎ ಚಿಂತಿಸಿದೆ. 2022ರಲ್ಲಿ ಬಿಡ್‌ ಪ್ರಕ್ರಿಯೆ ನಡೆಯಲಿದೆ.

ಈ ಬಾರಿಯ ಏಷ್ಯನ್‌ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಿರುವ ಇಂಡೊನೇಷ್ಯಾ ಕೂಡಾ 2032ರ ಒಲಿಂಪಿಕ್ಸ್‌ಗೆ ಆತಿಥ್ಯವಹಿಸಲು ಆಸಕ್ತಿ ತೋರಿದೆ. ಚೀನಾ, ಆಸ್ಟ್ರೇಲಿಯಾ, ಉತ್ತರ ಮತ್ತು ದಕ್ಷಿಣ ಕೊರಿಯಾ ಹಾಗೂ ಜರ್ಮನಿ ಕೂಡಾ ಬಿಡ್‌ ಸಲ್ಲಿಸಲು ತಯಾರಿ ನಡೆಸಿವೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !