ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜೆಂಟೀನಾಗೆ ಜಯದ ತವಕ

Last Updated 28 ನವೆಂಬರ್ 2018, 19:41 IST
ಅಕ್ಷರ ಗಾತ್ರ

ಭುವನೇಶ್ವರ: ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅರ್ಜೆಂಟೀನಾ ತಂಡದವರು ಹಾಕಿ ವಿಶ್ವಕಪ್‌ನಲ್ಲಿ ಶುಭಾರಂಭ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ.

ಗುರುವಾರ ಕಳಿಂಗ ಕ್ರೀಡಾಂಗಣದಲ್ಲಿ ನಡೆಯುವ ‘ಎ’ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಸ್ಪೇನ್‌ ಎದುರು ಸೆಣಸಲಿದೆ.

2016ರಲ್ಲಿ ರಿಯೊ ಡಿ ಜನೈರೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದ ಅರ್ಜೆಂಟೀನಾ, ವಿಶ್ವಕಪ್‌ನಲ್ಲಿ ಚೊಚ್ಚಲ ಚಿನ್ನದ ಪದಕಕ್ಕೆ ಮುತ್ತಿಕ್ಕುವ ಕನಸು ಕಾಣುತ್ತಿದೆ.

ಗೊಂಜಾಲೊ ಪೀಲಟ್‌, ಪೆಡ್ರೊ ಇಬಾರ, ಮತಿಯಾಸ್‌ ಪರೆಡೆಸ್‌ ಮತ್ತು ಲುಕಾಸ್‌ ವಿಲಾ ಅವರಂತಹ ಅನುಭವಿ ಆಟಗಾರರು ತಂಡದಲ್ಲಿದ್ದಾರೆ. ಇವರು ಸ್ಪೇನ್‌ ತಂಡದ ರಕ್ಷಣಾ ವಿಭಾಗಕ್ಕೆ ಸವಾಲಾಗುವ ಸಾಮರ್ಥ್ಯ ಹೊಂದಿದ್ದಾರೆ.

‘ರೆಡ್‌ ಸ್ಟಿಕ್ಸ್‌’ ಎಂದೇ ಕರೆಯ ಲಾಗುವ ಸ್ಪೇನ್‌ ಕೂಡಾ ಚೊಚ್ಚಲ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದೆ. ವಿಶ್ವಕಪ್‌ನಲ್ಲಿ ಈ ತಂಡ ಎರಡು ಬಾರಿ ರನ್ನರ್ಸ್‌ ಅಪ್‌ ಸಾಧನೆ ಮಾಡಿದ್ದು, ಒಮ್ಮೆ ಮೂರನೇ ಸ್ಥಾನ ಗಳಿಸಿದೆ.

ವಿಶ್ವಕಪ್‌ನಲ್ಲಿ ಉಭಯ ತಂಡಗಳು ಇದುವರೆಗೂ ಏಳು ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಸ್ಪೇನ್‌ ಮೂರು ಬಾರಿ ಗೆದ್ದಿದ್ದು, ಅರ್ಜೆಂಟೀನಾ ಎರಡು ಸಲ ವಿಜಯಿಯಾಗಿದೆ. ಎರಡು ಪಂದ್ಯಗಳು ಡ್ರಾ ಆಗಿವೆ. ಹೀಗಾಗಿ ಗುರುವಾರದ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಕಂಡುಬರುವ ನಿರೀಕ್ಷೆ ಇದೆ.

ಆರಂಭ: ಸಂಜೆ 5.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT