ಶನಿವಾರ, ಸೆಪ್ಟೆಂಬರ್ 18, 2021
28 °C

ಸಲ್ಮಾನ್ ಖಾನ್ ಭೇಟಿಯಾದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Salman Khan Twitter

ಬೆಂಗಳೂರು: ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ದೇಶದ ಹೆಮ್ಮೆಯ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಭೇಟಿಯಾಗಿದ್ದಾರೆ.

ಸಲ್ಮಾನ್ ಖಾನ್ ಅವರು ಮೀರಾಬಾಯಿ ಅವರನ್ನು ಭೇಟಿಯಾದ ವಿಚಾರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಮೀರಾಬಾಯಿ ಜತೆ ತೆಗೆಸಿಕೊಂಡ ಫೋಟೊವನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಈ ಟ್ವೀಟ್ ಅನ್ನು ಮೀರಾಬಾಯಿ ರಿಟ್ವೀಟ್ ಮಾಡಿದ್ದು, ನಾನು ನಿಮ್ಮ ದೊಡ್ಡ ಅಭಿಮಾನಿಯಾಗಿದ್ದೇನೆ. ನಿಮ್ಮನ್ನು ಭೇಟಿಯಾಗಬೇಕೆಂಬ ಕನಸು ಕೊನೆಗೂ ಈಡೇರಿದೆ ಎಂದಿದ್ದಾರೆ.

ಅಲ್ಲದೆ, ಇದೇ ಸಂದರ್ಭದಲ್ಲಿ ಮೀರಾಬಾಯಿ ಅವರು ಸಲ್ಮಾನ್ ಖಾನ್‌ಗೆ ನೀಡಿರುವ ಶಾಲು ಚರ್ಚೆಗೆ ಗ್ರಾಸವಾಗಿದೆ.

ಶಾಲಿನಲ್ಲಿ ಕೃಷ್ಣಮೃಗದ ಚಿತ್ರವಿದೆ. ಹಿಂದೆ ಸಲ್ಮಾನ್ ಖಾನ್ ಹೆಸರು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಕೂಡ ಕೇಳಿಬಂದಿತ್ತು. ಹೀಗಾಗಿ ಸಾಮಾಜಿಕ ತಾಣಗಳಲ್ಲಿ ಈ ವಿಚಾರ ಜೋರಾಗಿ ಚರ್ಚೆಯಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.