ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಲವ್ಲಿನಾ ಈಗ ಡಿಎಸ್‌ಪಿ!

ನವದೆಹಲಿ: ಕಳೆದ ವರ್ಷ ಜಪಾನ್‌ನಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಅವರನ್ನು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯೂಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಆಗಿ ನೇಮಕ ಮಾಡಲಾಗಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನೇಮಕ ಪತ್ರವನ್ನು ಹಸ್ತಾಂತರಿಸಿದರು.
ಇದನ್ನೂ ಓದಿ: IND vs SA 3rd Test: ಕೊಹ್ಲಿ ಅರ್ಧಶತಕ, ಟೀಮ್ ಇಂಡಿಯಾ 223ಕ್ಕೆ ಆಲೌಟ್
ಬಾಕ್ಸಿಂಗ್‌ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿರುವ ಲವ್ಲಿನಾ ಸಾಧನೆಯನ್ನು ಗುರುತಿಸಿ ಡಿಎಸ್‌ಪಿ ಹುದ್ದೆ ನೀಡಿ ಗೌರವಿಸಲಾಗಿದೆ.
Assam Chief Minister Himanata Biswa Sarma hands over the letter of appointment as Deputy Superintendent of Police to Tokyo Olympic bronze medalist boxer Lovlina Borgohain at Janata Bhawan, Dispur pic.twitter.com/FxHEuO4DzN
— ANI (@ANI) January 12, 2022
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 69 ಕೆ.ಜಿ. ವಿಭಾಗದಲ್ಲಿ 24 ವರ್ಷದ ಲವ್ಲಿನಾ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೂರನೇ ಬಾಕ್ಸರ್ ಎನಿಸಿದ್ದರು.
ಈ ಹಿಂದೆ ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರಿಗೂ ಅಸ್ಸಾಂ ಸರ್ಕಾರ ಡಿಎಸ್‌ಪಿ ಹುದ್ದೆ ನೀಡಿ ಗೌರವಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.