ಶುಕ್ರವಾರ, ಜುಲೈ 30, 2021
20 °C

ಆನ್‌ಲೈನ್ ಚೆಸ್‌: ಚಾರ್ವಿಗೆ ಚಿನ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಇಲ್ಲಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಚಾರ್ವಿ ಎ. ಎಐಸಿಎಫ್‌ ರಾಷ್ಟ್ರೀಯ ಆನ್‌ಲೈನ್‌ ಶಾಲಾ ಚೆಸ್ ಚಾಂಪಿಯನ್‌ಷಿಪ್‌ನ ಏಳು ವರ್ಷದೊಳಗಿನವರ ವಿಭಾಗದಲ್ಲಿ ಭಾನುವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾಳೆ. ಇದರೊಂದಿಗೆ ಈ ವರ್ಷದ ಏಷ್ಯನ್ ಆನ್‌ಲೈನ್‌ ಶಾಲಾ ಚಾಂಪಿಯನ್‌ಷಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾಳೆ.

ಚಾಂಪಿಯನ್‌ಷಿಪ್‌ನಲ್ಲಿ ಚಾರ್ವಿ ಒಟ್ಟು ಒಂಬತ್ತು ಪಾಯಿಂಟ್ಸ್ ಗಳಿಸಿ 10 ವರ್ಷದೊಳಗಿನವರ ವಿಶ್ವ ಯೂತ್ ಚೆಸ್‌ ಚಾಂಪಿಯನ್‌ಷಿಪ್‌ಗೂ ಆಯ್ಕೆಯಾದಳು. ತೆಲಂಗಾಣದ ಸಂಹಿತಾ ಪುಂಗವನಂ (8 ಪಾಯಿಂಟ್ಸ್) ಮತ್ತು ಮಹಾರಾಷ್ಟ್ರದ ಇರಾ ಬೊಹ್ರಾ (7 ಪಾಯಿಂಟ್ಸ್) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಗಳಿಸಿದರು ಎಂದು ಯುನೈಟೆಡ್ ಕರ್ನಾಟಕ ಚೆಸ್ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು