ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಪಾಕಿಸ್ತಾನಕ್ಕೆ ಪ್ರಶಸ್ತಿ

Last Updated 17 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಲಾಹೋರ್/ನವದೆಹಲಿ (ಎಎಫ್‌ಪಿ/ಪಿಟಿಐ):ರೋಚಕ ಅಂತ್ಯ ಕಂಡ ಪಂದ್ಯದಲ್ಲಿ ಭಾರತದ ‘ಅನಧಿಕೃತ’ ತಂಡವನ್ನು ಮಣಿಸಿದ ಪಾಕಿಸ್ತಾನ, ಸರ್ಕಲ್ ಸ್ಟೈಲ್ ಕಬಡ್ಡಿ ವಿಶ್ವಕಪ್‌ ಟೂರ್ನಿಯ‌ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ 43–41ರಲ್ಲಿ ಜಯ ಗಳಿಸಿತು.

ಇರಾನ್, ಇಂಗ್ಲೆಂಡ್, ಜರ್ಮನಿ, ಸೀರಾ ಲಿಯಾನ್, ಆಸ್ಟ್ರೇಲಿಯಾ, ಕೆನಡಾ ಮತ್ತು ಅಜರ್‌ಬೈಜಾನ್ ಟೂರ್ನಿಯಲ್ಲಿ ಪಾಲ್ಗೊಂಡ ಇತರ ತಂಡಗಳು.

ಈ ನಡುವೆ ಅನುಮತಿ ಇಲ್ಲದೆ ಟೂರ್ನಿಯಲ್ಲಿ ಪಾಲ್ಗೊಂಡ ಭಾರತ ತಂಡದ ವಿರುದ್ಧ ತನಿಖೆ ನಡೆಸುವಂತೆ ಕ್ರೀಡಾ ಸಚಿವ ಕಿರಣ್ ರಿಜುಜು ರಾಷ್ಟ್ರೀಯ ಕಬಡ್ಡಿ ಫೆಡರೇಷನ್‌ಗೆ ಸೂಚಿಸಿದ್ದಾರೆ. ಆದರೆ, ಇಂಥ ಅನಧಿಕೃತ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ಅನುಮತಿಯ ಅವಕಾಶವಿಲ್ಲ ಎಂದು ತಂಡದ ಪೋಷಕರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT