ಶನಿವಾರ, ಡಿಸೆಂಬರ್ 3, 2022
21 °C
ಎಲ್ಲ ಪಂದ್ಯಗಳಲ್ಲೂ ಜಯ

ವಿಶ್ವ ಸ್ನೂಕರ್‌ ಅರ್ಹತಾ ಟೂರ್ನಿ: ಪಂಕಜ್ ಅಡ್ವಾಣಿಗೆ ಅಗ್ರಸ್ಥಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕರ್ನಾಟಕದ ಪಂಕಜ್ ಅಡ್ವಾಣಿ ಅವರು ಇಲ್ಲಿ ನಡೆಯುತ್ತಿರುವ ಜಿಎಸ್‌ಸಿ ವಿಶ್ವ ಸ್ನೂಕರ್ ಅರ್ಹತಾ ಟೂರ್ನಿಯಲ್ಲಿ ಅಗ್ರಸ್ಥಾನ ಗಳಿಸಿದರು. ಆಡಿದ ಎಲ್ಲ 12 ಪಂದ್ಯಗಳಲ್ಲೂ ಅವರು ಜಯಭೇರಿ ಬಾರಿಸಿದರು.

ಹಲವು ಬಾರಿ ಏಷ್ಯನ್ ಹಾಗೂ ವಿಶ್ವ ಸ್ನೂಕರ್ ಚಾಂಪಿಯನ್ ಆಗಿರುವ 36 ವರ್ಷದ ಪಂಕಜ್‌, ಇಲ್ಲಿ ಒಟ್ಟು 10,760 ಪಾಯಿಂಟ್ಸ್ ಕಲೆಹಾಕಿದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಚಾಂಪಿಯನ್ ಆದಿತ್ಯ ಮೆಹ್ತಾ (10,156 ಪಾಯಿಂಟ್ಸ್) ಎರಡನೇ ಸ್ಥಾನ ಗಳಿಸಿದರೆ, ಲಕ್ಷ್ಮಣ್ ರಾವತ್‌, 9,396 ಪಾಯಿಂಟ್ಸ್‌ನೊಂದಿಗೆ ಮೂರನೇ ಸ್ಥಾನ ತಮ್ಮದಾಗಿಸಿಕೊಂಡರು.

ಪಂಕಜ್ ಹಾಗೂ ಆದಿತ್ಯ ವಿಶ್ವ ಸ್ನೂಕರ್ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಿದ್ದು, ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ದೋಹಾದಲ್ಲಿ ನಡೆಯುವ ಸಾಧ್ಯತೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು