ಶುಕ್ರವಾರ, ಜನವರಿ 24, 2020
20 °C

ಪಿಬಿಎಲ್: ಬೆಂಗಳೂರಿನ ಪಂದ್ಯಗಳು ಸ್ಥಳಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌ (ಪಿಬಿಎಲ್‌) ಐದನೇ ಆವೃತ್ತಿಯ ಅಂತಿಮ ಲೆಗ್‌ನ ಪಂದ್ಯಗಳನ್ನು ಬೆಂಗಳೂರಿನಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ.

ನಿಗದಿತ ದಿನಗಳಂದು ಕಂಠೀರವ ಕ್ರೀಡಾಂಗಣ ಲಭ್ಯವಿಲ್ಲದ ಕಾರಣ‌ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಾಗುತ್ತಿಲ್ಲ ಎಂದು ಬೆಂಗಳೂರು ರ‍್ಯಾಪ್ಟರ್ಸ್‌ ಫ್ರಾಂಚೈಸ್‌ ಶುಕ್ರವಾರ ಆಯೋಜಕರಿಗೆ ತಿಳಿಸಿದೆ.

‘ಮೊದಲು ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ ಬೆಂಗಳೂರಿನಲ್ಲಿ ಫೆಬ್ರುವರಿ 5ರಿಂದ 9ರವರೆಗೆ ಎರಡು ಲೀಗ್‌, ಎರಡು ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯಗಳು ನಡೆಯಬೇಕಿತ್ತು. ಕ್ರೀಡಾಂಗಣ ಲಭ್ಯವಿಲ್ಲದ ಕಾರಣ ಪಂದ್ಯಗಳನ್ನು ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ’ ಎಂದು ಪಿಬಿಎಲ್‌ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯ ಪ್ರಕಾರ ಹೈದರಾಬಾದ್‌ನಲ್ಲಿ ಇದೇ ತಿಂಗಳ 29ರಿಂದ ಫೆಬ್ರುವರಿ 9ರ ಅವಧಿಯಲ್ಲಿ ಒಟ್ಟು 15 ಪಂದ್ಯಗಳು ಆಯೋಜನೆಯಾಗಲಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು