ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಹೊಸ ನಿರೀಕ್ಷೆ, ಆಟಗಾರರ ಹರಾಜು

Last Updated 29 ಆಗಸ್ಟ್ 2021, 2:55 IST
ಅಕ್ಷರ ಗಾತ್ರ

ಬೆಂಗಳೂರು: ತಂಡವನ್ನು ಬಲ ಪಡಿಸುವ ಕನಸು ಹೊತ್ತುಕೊಂಡಿರುವ 12 ಫ್ರಾಂಚೈಸ್‌ ಗಳು ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌) ಟೂರ್ನಿಯ ಎಂಟನೇ ಆವೃತ್ತಿಯಲ್ಲಿ ಹೊಸ ಆಟಗಾರರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸಲಿವೆ. ಆಟಗಾರರ ಹರಾಜು ಭಾನುವಾರ ಮುಂಬೈಯಲ್ಲಿ ಆರಂಭಗೊಳ್ಳಲಿದೆ.

ಸ್ಥಳೀಯ ಆಟಗಾರರನ್ನು ಎ,ಬಿ,ಸಿ ಮತ್ತು ಡಿ ವಿಭಾಗಗಳಾಗಿ ವಿಂಗಡಿಸಲಾಗಿದೆ. ‘ಎ’ ವಿಭಾಗದವರಿಗೆ ಗರಿಷ್ಠ ಮೂಲ ಬೆಲೆ ₹ 30 ಲಕ್ಷ ಸಿಗಲಿದೆ. ‘ಬಿ’ ವಿಭಾಗದವರಿಗೆ ₹ 20 ಲಕ್ಷ, ‘ಸಿ’ ವಿಭಾಗದವರಿಗೆ ₹ 10 ಲಕ್ಷ ಮತ್ತು ‘ಡಿ’ ವಿಭಾಗದವರಿಗೆ ₹ 6 ಲಕ್ಷ ಸಿಗಲಿದೆ.

ಪ್ರತಿ ತಂಡದಲ್ಲಿ ಕನಿಷ್ಠ ಇಬ್ಬರು ವಿದೇಶಿ ಆಟಗಾರರು ಇರಬೇಕು. ಗರಿಷ್ಠ ನಾಲ್ವರನ್ನು ಖರೀದಿಸಲು ಮಾತ್ರ ಅವಕಾಶವಿದೆ. ಹೊಸ ಯುವ ಆಟಗಾರರ ಪಟ್ಟಿಯಲ್ಲಿ ಸೇರದ, ಈಗಾಗಲೇ ತಂಡದಲ್ಲಿ ಇರುವ ಗರಿಷ್ಠ ಆರು ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸ್‌ಗಳಿಗೆ ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT