ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CWG:ಲಾನ್‌ಬಾಲ್ಸ್‌ನಲ್ಲಿ ಚಿನ್ನಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ ಅಭಿನಂದನೆ

Last Updated 2 ಆಗಸ್ಟ್ 2022, 16:06 IST
ಅಕ್ಷರ ಗಾತ್ರ

ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಲಾನ್‌ಬಾಲ್ಸ್‌ ಸ್ಪರ್ಧೆಯ ಫೋರ್ಸ್‌ ವಿಭಾಗದಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತದ ಮಹಿಳಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಆಟಗಾರರ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತದೆ ಎಂದು ಕೊಂಡಾಡಿದ್ದಾರೆ.

ಲಾನ್‌ಬಾಲ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ ತಲುಪಿದ್ದ ಭಾರತ ತಂಡವು ಸ್ಫೂರ್ತಿದಾಯಕ ಆಟದ ಮೂಲಕ ಚೊಚ್ಚಲ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿತು.

ಲವ್ಲಿ ಚೌಬೆ ನೇತೃತ್ವದ, ಪಿಂಕಿ, ನಯನ್ಮೊನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕೆ ಅವರನ್ನು ಒಳಗೊಂಡ ಭಾರತ ತಂಡವ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 17-10 ಅಂತರದಿಂದ ಮಣಿಸಿತು.

'ಬರ್ಮಿಂಗ್‌ಹ್ಯಾಮ್‌ನಲ್ಲಿ ಐತಿಹಾಸಿಕ ಗೆಲುವು! ಲಾನ್ ಬಾಲ್ಸ್‌ನಲ್ಲಿ ಪ್ರತಿಷ್ಠಿತ ಚಿನ್ನದ ಪದಕವನ್ನು ತಂದಿದ್ದಕ್ಕಾಗಿ ಲವ್ಲಿ ಚೌಬೆ, ಪಿಂಕಿ ಸಿಂಗ್, ನಯನ್ಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಅವರ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ತಂಡವು ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿದೆ ಮತ್ತು ಅವರ ಯಶಸ್ಸು ಅನೇಕ ಭಾರತೀಯರನ್ನು ಲಾನ್ ಬಾಲ್ಸ್‌ ಆಟದ ಕಡೆಗೆ ಪ್ರೇರೇಪಿಸುತ್ತದೆ’ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT