ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CWG 2022: ಪದಕ ಗೆದ್ದ ಸುಧೀರ್, ಶ್ರೀಶಂಕರ್‌ಗೆ ಪ್ರಧಾನಿ ಮೋದಿ ಅಭಿನಂದನೆ

Last Updated 5 ಆಗಸ್ಟ್ 2022, 7:10 IST
ಅಕ್ಷರ ಗಾತ್ರ

ನವದೆಹಲಿ: ಬರ್ಮಿಂಗ್‌ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ಚಿನ್ನ ಹಾಗೂ ಬೆಳ್ಳಿಯ ಪದಕ ಜಯಿಸಿರುವ ಸುಧೀರ್ ಮತ್ತು ಮುರಳಿ ಶ್ರೀಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

‘ಕಾಮನ್‌ವೆಲ್ತ್ ಕ್ರೀಡಾಕೂಟದ ಪ್ಯಾರಾ ಕ್ರೀಡೆಯಲ್ಲಿ ಸುಧೀರ್ ಅವರು ಚಿನ್ನ ಗೆಲ್ಲುವ ಮೂಲಕ ಭಾರತಕ್ಕೆ ಉತ್ತಮ ಆರಂಭ ದೊರೆತಿದೆ. ಚಿನ್ನ ಗೆಲ್ಲುವ ಮೂಲಕ ಅವರು ಸಮರ್ಪಣಾ ಮನೋಭಾವ ಮತ್ತು ದೃಢತೆಯನ್ನು ಸಾಬೀತುಪಡಿಸಿದ್ದಾರೆ. ಅವರು ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಭವಿಷ್ಯದ ಸಾಧನೆಗಳಿಗೆ ಶುಭ ಹಾರೈಕೆಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಎಂ ಶ್ರೀಶಂಕರ್ ಅವರ ಬೆಳ್ಳಿ ಪದಕದ ಸಾಧನೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ವಿಶಿಷ್ಟವಾದದ್ದು. ದಶಕಗಳ ನಂತರ ಪುರುಷರ ಲಾಂಗ್‌ ಜಂಪ್‌ನಲ್ಲಿ ಭಾರತಕ್ಕೆ ಪದಕ ದೊರೆತಿದೆ. ಅವರ ಸಾಧನೆಯು ಭಾರತದ ಅಥ್ಲೆಟಿಕ್ಸ್‌ನ ಭವಿಷ್ಯವನ್ನು ಉತ್ತಮಗೊಳಿಸಲಿದೆ. ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಅವರು ಉತ್ತಮ ಸಾಧನೆ ಮಾಡಲಿ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮೋದಿ ಶುಭ ಹಾರೈಸಿದ್ದಾರೆ.

ಹೆವಿ ವೇಟ್‌ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಮೊದಲ ಯತ್ನದಲ್ಲಿ 208 ಕೆ.ಜಿ. ಭಾರ ಎತ್ತಿದ ಸುಧೀರ್, ಎರಡನೇ ಯತ್ನದಲ್ಲಿ 212 ಕೆ.ಜಿ. ಎತ್ತುವ ಮೂಲಕ 134.5 ಅಂಕ ಗಳಿಸಿ ಚಿನ್ನದ ಪದಕ ಜಯಿಸಿದ್ದಾರೆ. ಪುರುಷರ ವಿಭಾಗದ ಲಾಂಗ್‌ ಜಂಪ್ ಸ್ಪರ್ಧೆಯಲ್ಲಿ ಭಾರತದ ಮುರಳಿ ಶ್ರೀಶಂಕರ್ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ. ಇವರು 8.08 ಮೀಟರ್‌ ದೂರ ಜಿಗಿಯುವ ಮೂಲಕ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟದ ಲಾಂಗ್ ಜಂಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೊದಲ ಪುರುಷ ಅಥ್ಲೀಟ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT