ಗುರುವಾರ , ಸೆಪ್ಟೆಂಬರ್ 16, 2021
29 °C

ಕೊಟ್ಟ ಮಾತಿನಂತೆ ಪಿ.ವಿ.ಸಿಂಧು ಜೊತೆ ಐಸ್‍ಕ್ರೀಂ ಸವಿದ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ತವರಿಗೆ ಬಂದ ಬಳಿಕ ನಿಮ್ಮೊಟ್ಟಿಗೆ ಐಸ್‍ಕ್ರೀಂ ಸವಿಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಗೆ ಮಾತುಕೊಟ್ಟಿದ್ದರು. ಆದರಂತೆ ಪಿ.ವಿ ಸಿಂಧು ಜೊತೆ ಐಸ್‍ಕ್ರೀಂ ಸವಿಯುವ ಮೂಲಕ ಮೋದಿ ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ತಮ್ಮ ನಿವಾಸದಲ್ಲಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಔತಣಕೂಟ ಏರ್ಪಡಿಸಿದ್ದರು. ಈ ವೇಳೆ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸಿಂಧು ಜತೆ ಐಸ್‍ಕ್ರೀಂ ಸೇವಿಸುತ್ತ ಕೆಲಹೊತ್ತು ಮೋದಿ ಸಮಯ ಕಳೆದಿದ್ದಾರೆ.
 

ಒಲಿಂಪಿಕ್ಸ್‌ಗೆ ತೆರಳುವ ಮುನ್ನ ಜುಲೈ 14ರಂದು ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದರು.

ಸಂವಾದದಲ್ಲಿ ಮಾತನಾಡಿದ್ದ ಸಿಂಧು, ‘ನಾನು ಒಲಿಂಪಿಕ್ಸ್‌ಗೆ ತಯಾರಿ ನಡೆಸುತ್ತಿರುವುದರಿಂದ ಆಹಾರ ಕ್ರಮದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಂಡಿದ್ದೇನೆ. ಹಾಗಾಗಿ ನಾನು ಐಸ್ ಕ್ರೀಂ ಹೆಚ್ಚು ತಿನ್ನುವುದಿಲ್ಲ ಎಂದು ಹೇಳಿದ್ದರು. ಇದೇ ವೇಳೆ ಮಾತನಾಡಿದ್ದ ಮೋದಿ, ಒಲಿಂಪಿಕ್ಸ್‌ನಿಂದ ತವರಿಗೆ ಮರಳಿದ ಬಳಿಕ ನಿಮ್ಮೊಂದಿಗೆ ಐಸ್‌ ಕ್ರೀಂ ಸವಿಯುತ್ತೇನೆ ಎಂದು ಭರವಸೆ ನೀಡಿದ್ದರು

ಔತಣಕೂಟದಲ್ಲಿ ನೀರಜ್ ಚೋಪ್ರಾ, ಪಿ.ವಿ.ಸಿಂಧು, ಮೀರಾಬಾಯಿ ಚಾನು, ಲವ್ಲಿನಾ ಬೊರ್ಗೊಹೈನ್, ಪುರುಷರು ಮತ್ತು ಮಹಿಳಾ ಹಾಕಿ ತಂಡದ ಆಟಗಾರ್ತಿಯರು ಸೇರಿದಂತೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳೆಲ್ಲರೂ ಭಾಗವಹಿಸಿದ್ದರು. ಅವರೆಲ್ಲರೊಂದಿಗೆ ಮೋದಿ ಮಾತುಕತೆ ನಡೆಸಿದರು.

ಇದನ್ನೂ ಓದಿ... INDvsENG: ಸಿರಾಜ್‌ರಂತಹ ಆಕ್ರಮಣಶೀಲತೆ ಗೆಲುವಿಗೆ ಸಹಾಯ ಮಾಡುತ್ತದೆ: ಸಲ್ಮಾನ್ ಬಟ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು