ಮಂಗಳವಾರ, ಏಪ್ರಿಲ್ 20, 2021
27 °C
ಖೇಲೋ ಇಂಡಿಯಾ ವಿಂಟರ್‌ ಗೇಮ್ಸ್‌’ಗೆ ಚಾಲನೆ

ಚಳಿಗಾಲದ ಕ್ರೀಡಾ ಕೇಂದ್ರವಾಗಲಿದೆ ಕಾಶ್ಮೀರ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ದೇಶದ ಚಳಿಗಾಲದ ಕ್ರೀಡಾ ಕೇಂದ್ರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಲ್‌ಮಾರ್ಗ್‌ನಲ್ಲಿ ಎರಡನೇ ‘ಖೇಲೋ ಇಂಡಿಯಾ ವಿಂಟರ್‌ ಗೇಮ್ಸ್‌’ ಅನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಕಾರ್ಯಕ್ರಮವು ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಚಳಿಗಾಲದ ಕ್ರೀಡೆಗಳ ಕೇಂದ್ರವನ್ನಾಗಿ ಮಾಡುವ ಹೆಜ್ಜೆಯಾಗಿದೆ’ ಎಂದು ಹೇಳಿದ್ದಾರೆ.

27 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಅಥ್ಲೀಟ್‌ಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಮಾರ್ಚ್ 2ರ ವರೆಗೆ ಕ್ರೀಡಾಕೂಟ ನಡೆಯಲಿದೆ.

‘ಇದು ಅಂತರರಾಷ್ಟ್ರೀಯ ಚಳಿಗಾಲದ ಆಟಗಳ ರಂಗದಲ್ಲಿ ಭಾರತದ ಉಪಸ್ಥಿತಿಯನ್ನು ತೋರ್ಪಡಿಸುವ ಹಂತವಾಗಿದೆ. ಈ ಕ್ರೀಡಾಕೂಟಗಳು ‘ಏಕ್ ಭಾರತ್, ಶ್ರೇಷ್ಠ ಭಾರತ್' ಸಂಕಲ್ಪವನ್ನು ಬಲಪಡಿಸುತ್ತವೆ’ ಎಂದು ಮೋದಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು