ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Paralympics ಬ್ಯಾಡ್ಮಿಂಟನ್: ಬೆಳ್ಳಿ ಗೆದ್ದ ಸುಹಾಸ್‌ಗೆ ಪ್ರಧಾನಿ ಮೋದಿ ಅಭಿನಂದನೆ

Last Updated 5 ಸೆಪ್ಟೆಂಬರ್ 2021, 6:38 IST
ಅಕ್ಷರ ಗಾತ್ರ

ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಭಾನುವಾರ ಬೆಳ್ಳಿ ಪದಕದ ಸಾಧನೆ ಮಾಡಿರುವ ಸುಹಾಸ್‌ ಯತಿರಾಜ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಐಎಎಸ್‌ ಅಧಿಕಾರಿಯೂ ಆಗಿರುವ ಸುಹಾಸ್‌ ಅವರನ್ನು ಸೇವೆ ಮತ್ತು ಕ್ರೀಡೆ ಎರಡರ ಅತ್ಯುತ್ತಮ ಸಂಗಮ ಎಂದು ಬಣ್ಣಿಸಿದ್ದಾರೆ.

ಗೌತಮ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್‌) ಕನ್ನಡಿಗ ಸುಹಾಸ್ ಯತಿರಾಜ್, ಪುರುಷರ ಬ್ಯಾಡ್ಮಿಂಟನ್‌ (ಎಸ್‌ಎಲ್‌–4) ಫೈನಲ್‌ನಲ್ಲಿ ಫ್ರಾನ್ಸ್‌ನ ಲೂಕಾಸ್‌ ಮಜೂರ್‌ ಎದುರು ಸೋಲು ಕಂಡರು. 38 ವರ್ಷ ವಯೋಮಾನದ ಸುಹಾಸ್‌ ಅವರು ಮಜೂರ್‌ ಎದುರು 62 ನಿಮಿಷಗಳ ಹೋರಾಟದಲ್ಲಿ 21-15, 17-21, 15-21 ಅಂತರದಲ್ಲಿ ಸೋಲು ಅನುಭವಿಸಿದರು.

ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ 'ಸುಹಾಸ್‌ ಯತಿರಾಜ್‌ ಕ್ರೀಡಾ ಪ್ರದರ್ಶನದ ಮೂಲಕ ನಮ್ಮ ಇಡೀ ದೇಶದ ಗಮನ ಸೆಳೆದಿದ್ದಾರೆ. ಸೇವೆ ಮತ್ತು ಕ್ರೀಡೆಯ ಅದ್ಭುತ ಸಂಗಮ. ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿಯ ಪದಕ ಗೆದ್ದಿರುವ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭವಾಗಲಿ' ಎಂದಿದ್ದಾರೆ.

ಮಂಡ್ಯದ ಲಾಳಿನಕೆರೆ ಮೂಲದ ಸುಹಾಸ್‌ ಯತಿರಾಜ್‌ ಅವರು 2007ನೇ ಬ್ಯಾಚ್‌ನ ಉತ್ತರ ಪ್ರದೇಶ ಕೇಡರ್‌ನ ಐಎಎಸ್‌ ಅಧಿಕಾರಿ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅಭಿನಂದಿಸುತ್ತ 'ವಿಶ್ವದ ನಂ.1 ಆಟಗಾರನಿಗೆ ತೀವ್ರ ಪೈಪೋಟಿ ನೀಡಿ, ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸುಹಾಸ್‌ ಯತಿರಾಜ್‌ಗೆ ಅಭಿನಂದನೆಗಳು. ನಾಗರಿಕ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತ ಕ್ರೀಡೆಯಲ್ಲೂ ಮಾಡಿರುವ ಸಾಧನೆ ಅಸಾಧಾರಣವಾದುದು...' ಎಂದಿದ್ದಾರೆ.

ಐಎಎಸ್‌ ಅಧಿಕಾರಿಗಳ ಸಂಘ ಸಹ ಸುಹಾಸ್‌ ಅವರನ್ನು ಅಭಿನಂದಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT