ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗುವಿನ ಶಸ್ತ್ರಚಿಕಿತ್ಸೆ: ಒಲಿಂಪಿಕ್‌ ಪದಕ ಹರಾಜಿಗಿಟ್ಟ ಪೋಲೆಂಡ್‌ ಅಥ್ಲೀಟ್‌

Last Updated 19 ಆಗಸ್ಟ್ 2021, 12:45 IST
ಅಕ್ಷರ ಗಾತ್ರ

ವಾರ್ಸೊ: ಟೋಕಿಯೊ ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದಿದ್ದ ಪೋಲೆಂಡ್‌ ದೇಶದ ಮಾರಿಯಾ ಆ್ಯಂಡ್ರೆಜೆಕ್‌ ತಮ್ಮ ಪದಕವನ್ನು ಹರಾಜಿಗೆ ಇಟ್ಟಿದ್ದಾರೆ.

8 ತಿಂಗಳ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವ ಸಲುವಾಗಿ ಒಲಿಂಪಿಕ್ಸ್‌ ಪದಕವನ್ನು ಹರಾಜಿಗೆ ಇಟ್ಟಿದ್ದಾರೆ.

ಮಾರಿಯಾ ಆ್ಯಂಡ್ರೆಜೆಕ್‌ಜಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಈ ಸಲ ಅವರು 64.3 ಮೀಟರ್‌ ಎಸೆದಿದ್ದರು. ಕಳೆದ ರಿಯೊ ಒಲಿಂಪಿಕ್ಸ್‌ನಲ್ಲಿ 4ನೇ ಸ್ಥಾನ ಪಡೆದಿದ್ದರು.

ಪೋಲೆಂಡ್‌ ಮಗುವಿನ ಹೃದಯದ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ನಡೆಯಲಿದೆ. ಇದಕ್ಕೆ ಲಕ್ಷಾಂತರ ರೂಪಾಯಿ ವೆಚ್ಚವಾಗಲಿದೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. ಪದಕವನ್ನು ಹರಾಜಿಗೆ ಇಡುವ ಮೂಲಕ ಶಸ್ತ್ರ ಚಿಕಿತ್ಸೆಗೆ ಬೇಕಾಗುವ ಹಣವನ್ನು ಸಂಗ್ರಹಿಸುವ ಉದ್ದೇಶ ಮಾರಿಯಾ ಅವರದ್ದಾಗಿದೆ.

ಮಗುವಿನ ಶಸ್ತ್ರಚಿಕಿತ್ಸೆಗಾಗಿ ಪದಕವನ್ನು ಹರಾಜಿಗೆ ಇಟ್ಟಿರುವುದಾಗಿ ಮಾರಿಯಾ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT