ಭಾನುವಾರ, ಸೆಪ್ಟೆಂಬರ್ 19, 2021
25 °C

‘ಸಂಪ್ರದಾಯ ಬಿಡದ ಮೀರಾ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್‌ನ ಮಹಿಳೆಯರ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಜಯಿಸಿದರೂ ಮೀರಾಬಾಯಿ ಚಾನು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮರೆತಿಲ್ಲ. ಸದ್ಯ ಹುಟ್ಟೂರಾದ ಮಣಿಪುರದ ನಂಗ್‌ ಪಾಕ್ ಕಾಕ್ಜಿಂಗ್‌ನ ಮನೆಯಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವರ ಸರಳ ನಡ ವಳಿಕೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಮಣಿಪುರ, ಮಿಜೋರಾಂ ರಾಜ್ಯಗಳಲ್ಲಿ ಇವತ್ತಿಗೂ ನೆಲದ ಮೇಲೆ ಕುಳಿತುಕೊಂಡೇ ಊಟ ಮಾಡುವ ಸಂಪ್ರದಾಯವಿದೆ. ಮೀರಾ ಮನೆಯಲ್ಲಿಯೂ ಅದೇ ರೂಢಿ ಮೊದಲಿನಿಂದಲೂ ಇದೆ.  ಮೀರಾ ವಿಶ್ವ ಚಾಂಪಿಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ ಪದಕ ಗೆದ್ದ ನಂತರ ಆರ್ಥಿಕ ಪರಿಸ್ಥಿತಿ  ಉತ್ತಮವಾಗಿದೆ. ಆದರೆ ಅವರು ತಮ್ಮ ಹಳೆಯ ಮನೆಯನ್ನೇ ಉಳಿಸಿಕೊಂಡಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಆಕೆಯಲ್ಲಿ ಸರಳ ಗುಣವಿದೆ. ಆದ್ದ ರಿಂದಲೇ ಇಂತಹ ದೊಡ್ಡ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದು ಮೀರಾ ಅವರ ಕೋಚ್ ವಿಜಯ ಶರ್ಮಾ ‘ಪ್ರಜಾವಾಣಿ‘ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು