ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್: ಆಯ್ಕೆ ಪ್ರಕ್ರಿಯೆಗೆ ಪ್ರಜಕ್ತಾ ಬೇಸರ

Last Updated 30 ನವೆಂಬರ್ 2019, 16:02 IST
ಅಕ್ಷರ ಗಾತ್ರ

ನವದೆಹಲಿ: ನೇಪಾಳದಲ್ಲಿ ನಡೆಯಲಿರುವ ದಕ್ಷಿಣ ಏಷ್ಯಾ ಕ್ರೀಡಾಕೂಟಕ್ಕೆ ಭಾರತ ಬ್ಯಾಡ್ಮಿಂಟನ್ ತಂಡದ ಆಯ್ಕೆ ಸಮರ್ಪಕವಾಗಿ ನಡೆದಿಲ್ಲ ಎಂದು ಡಬಲ್ಸ್ ಆಟಗಾರ್ತಿ ಪ್ರಜಕ್ತಾ ಸಾವಂತ್‌ ದೂರಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಪ್ರಜಕ್ತಾ ತಂಡದ ಆಯ್ಕೆಯನ್ನು ಪ್ರಶ್ನಿಸಿದ್ದು ಭಾರತ ಬ್ಯಾಡ್ಮಿಂಟನ್ ಸಂಸ್ಥೆಯ (ಬಿಎಐ) ಅಧ್ಯಕ್ಷ ಹಿಮಾಂತ ವಿಶ್ವ ಶರ್ಮಾ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.

‘ದಕ್ಷಿಣ ಏಷ್ಯಾ ಕೂಟಕ್ಕೆ ಭಾರತ ತಂಡವನ್ನು ಈಗಾಗಲೇ ಅನಧಿಕೃತವಾಗಿ ಪ್ರಕಟಿಸಿದ್ದಾರೆ. ಆಟಗಾರರು ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ಗಳನ್ನು ಹಾಕಿ, ನೇಪಾಳಕ್ಕೆ ತಲುಪಿರುವ ಬಗ್ಗೆ ಬರೆಯುತ್ತಿದ್ದಾರೆ. ತಂಡದ ಆಯ್ಕೆ ಯಾವ ಮಾನದಂಡದಲ್ಲಿ ನಡೆದಿದೆ ಎಂದು ತಿಳಿಯುತ್ತಿಲ್ಲ’ ಎಂದು ಅವರು ಪ್ರಜಕ್ತಾ ಬರೆದಿದ್ದಾರೆ.

ಆದರೆ ಬಿಎಐ ಈ ಆರೋಪವನ್ನು ನಿರಾಕರಿಸಿದೆ. ತಂಡದ ಆಯ್ಕೆಯಲ್ಲಿ ಯಾವುದೇ ರೀತಿಯ ಪೂರ್ವಾಗ್ರಹ ಇರಲಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT