ಶುಕ್ರವಾರ, ಜೂಲೈ 10, 2020
22 °C

ಯೂತ್‌ ಒಲಿಂಪಿಕ್ಸ್‌ ವಿಜೇತರನ್ನು ಭೇಟಿ ಮಾಡಿದ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: ಅರ್ಜೆಂಟೀನಾದಲ್ಲಿ ನಡೆದ ಯೂತ್‌ ಒಲಿಂಪಿಕ್ಸ್‌ನಲ್ಲಿ  ಪದಕ ಜಯಿಸಿದ ಭಾರತದ ಕ್ರೀಡಾಪಟುಗಳನ್ನು ಭಾನುವಾರ ಭೆಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದ ನಂತರ ಟ್ವೀಟ್ ಮಾಡಿರುವ ಅವರು, ‘ನಮ್ಮ ಯುವಶಕ್ತಿ ಬಗ್ಗೆ ಹೆಮ್ಮೆ ಇದೆ। ಯೂತ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದಿರುವ ಯುವ  ಅಥ್ಲೀಟ್‌ಗಳೊಂದಿಗೆ ಮಾತುಕತೆ ನಡೆಸಿದೆ. ಅವರಿಗೆ ಅಭಿನಂದನೆಗಳು’ ಎಂದಿದ್ದಾರೆ.

ಕೂಟದ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ  ಶೂಟಿಂಗ್ ಪಟು ಮನು ಭಾಕರ್ ಮತ್ತು ಹಾಕಿಯಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿರುವ ಪುರುಷ ಮತ್ತು ಮಹಿಳಾ ತಂಡಗಳ ಚಿತ್ರಗಳನ್ನು ಅವರು ತಮ್ಮ ಸಂದೇಶದೊಂದಿಗೆ ಪೋಸ್ಟ್‌ ಮಾಡಿದ್ದಾರೆ.

ಈ ಬಾರಿ ಭಾರತವು ಯೂತ್‌ ಒಲಿಂಪಿಕ್ಸ್‌ನಲ್ಲಿ 13 ಪದಕಗಳನ್ನು ಜಯಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು