ಬುಧವಾರ, ಮಾರ್ಚ್ 22, 2023
32 °C

Wrestlers Protest | ಕ್ರೀಡಾಪಟುಗಳು ದೇಶದ ಹೆಮ್ಮೆ: ತನಿಖೆಗೆ ಪ್ರಿಯಾಂಕಾ ಆಗ್ರಹ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ನಮ್ಮ ಕ್ರೀಡಾಪಟುಗಳು ದೇಶದ ಹೆಮ್ಮೆ. ಜಾಗತಿಕ ಮಟ್ಟದಲ್ಲಿ ತಮ್ಮ ಸಾಧನೆಯಿಂದ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಉಲ್ಲೇಖ ಮಾಡಿದರು.

ಇದನ್ನೂ ಓದಿ: 

ಭಾರತ ಕುಸ್ತಿ ಫೆಡರೇಷನ್ ಮತ್ತು ಅದರ ಅಧ್ಯಕ್ಷರ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ಕುಸ್ತಿಪಟುಗಳು ಗಂಭೀರ ಆರೋಪ ಮಾಡಿದ್ದಾರೆ. ಆಟಗಾರರ ಧ್ವನಿಯನ್ನು ಆಲಿಸಬೇಕು ಎಂದು ಹೇಳಿದರು.

 

 

 

ಮತ್ತೊಂದೆಡೆ ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ.

 

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ತರಬೇತುದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು