ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ ಕಬಡ್ಡಿ ವೇಳಾಪಟ್ಟಿ ಪ್ರಕಟ: ಕಂಠೀರವದಲ್ಲಿ ಅಕ್ಟೋಬರ್ 7ರಿಂದ ಕಬಡ್ಡಿ ಕಲರವ

ಮೊದಲ ಪಂದ್ಯದಲ್ಲಿ ದಬಂಗ್ ಡೆಲ್ಲಿಗೆ ಮುಂಬಾ ಸವಾಲು
Last Updated 21 ಸೆಪ್ಟೆಂಬರ್ 2022, 13:54 IST
ಅಕ್ಷರ ಗಾತ್ರ

ಬೆಂಗಳೂರು:ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಟೂರ್ನಿಯ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ ಬುಧವಾರ ಪ್ರಕಟಿಸಿದೆ. ಉದ್ಯಾನನಗರಿಯ ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 7ರಿಂದ ಕಬಡ್ಡಿ ಕಲರವ ಆರಂಭವಾಗಲಿದೆ.

ಅ.7ರಿಂದ ನಂತರ 26ರವರೆಗೆ ಮೊದಲ ಹಂತದ ಪಂದ್ಯಗಳು ನಡೆಯಲಿದ್ದು, ಅ.28ರಿಂದ ನವೆಂಬರ್‌ 7ರವರೆಗೆ ಪುಣೆಯ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ನಂತರದ ಹಂತದ ಪಂದ್ಯಗಳು ಆಯೋಜನೆಯಾಗಿವೆ. ಈ ಬಾರಿ ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಲೀಗ್‌ನ ಮೊದಲ ಮೂರು ದಿನ, ಪ್ರತಿ ದಿನಕ್ಕೆ ಮೂರು ಪಂದ್ಯಗಳು ನಡೆಯಲಿವೆ. ಪ್ರತಿ ಶುಕ್ರವಾರ ಮತ್ತು ಭಾನುವಾರವೂ ಮೂರು ಪಂದ್ಯಗಳನ್ನು ಆಡಿಸಲಾಗುತ್ತದೆ.

ಮೊದಲಾರ್ಧದಲ್ಲಿ ಒಟ್ಟು 66 ಪಂದ್ಯಗಳು ಆಯೋಜನೆಯಾಗಿವೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ದಬಂಗ್ ಡೆಲ್ಲಿ ಮತ್ತು ಯು ಮುಂಬಾ ಸೆಣಸಲಿವೆ. ಅದೇ ದಿನ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ತೆಲುಗು ಟೈಟನ್ಸ್‌ಗೆ ಮುಖಾಮುಖಿಯಾಗುವುದು.

ಲೀಗ್‌ನ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಪ್ರಕಟಿಸಲಾಗುತ್ತದೆ.

‘ಪಂದ್ಯ ವೀಕ್ಷಿಸಲು ಬುಕ್‌ಮೈಶೊ ಆ್ಯಪ್‌ನಲ್ಲಿ ಟಿಕೆಟ್‌ ಕಾಯ್ದಿರಿಸಬಹುದು ಮೂಲಕ ಕಾಯ್ದಿರಿಸಿಕೊಳ್ಳಬಹುದು. ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ಪಂದ್ಯಗಳು ನೇರಪ್ರಸಾರವಾಗಲಿವೆ‘ ಎಂದು ಮಶಾಲ್ ಸ್ಪೋರ್ಟ್ಸ್ ಮುಖ್ಯಸ್ಥ ಅನುಪಮ್ ಗೋಸ್ವಾಮಿ ಹೇಳಿದ್ದಾರೆ.

* ಮೊದಲಾರ್ಧದ ವೇಳಾಪಟ್ಟಿ ಪ್ರಕಟಿಸಿದ ಮಶಾಲ್ ಸ್ಪೋರ್ಟ್ಸ್

* ಅಕ್ಟೋಬರ್‌ 7ರಿಂದ ಮತ್ತು ನವೆಂಬರ್‌ 7ರವರೆಗೆ 66 ಪಂದ್ಯಗಳು

* 12 ತಂಡಗಳು ಕಣದಲ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT